ಬೆಂಗಳೂರು: ಎಸ್ಜೆ ಪಾರ್ಕ್ ಪೊಲೀಸ್ ಠಾಣೆ ಬಳಿ ಕೆಟ್ಟು ನಿಂತ ಆಟೋದಲ್ಲಿ ಒಂದು ಕೋಟಿ ನಗದು ಪತ್ತೆ ಪ್ರಕರಣ ಸಂಬಂಧ ಎಸ್ಜೆ ಪಾರ್ಕ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿರುವಾಗ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಬಿಜೆಪಿ ಪಕ್ಷದ ನಾಯಕರೊಬ್ಬರಿಗೆ ಸೇರಿದ ಹಣ ಇದಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ವಿಜಯ ನಗರದಿಂದ ಜಯನಗರಕ್ಕೆ ರವಾನೆ ಮಾಡುತ್ತಿದ್ದಾಗ ಎಸ್ಜೆ ಪಾರ್ಕ್ ಪೊಲೀಸ್ ಠಾಣೆ ಬಳಿ ಆಟೋ ಕೆಟ್ಟು ನಿಂತಿದೆ. ಇದನ್ನು ಪರಿಶೀಲನೆ ನಡೆಸಿದ್ದ ಪೊಲೀಸರಿಗೆ ಕೋಟಿ ರೂಪಾಯಿ ಪತ್ತೆಯಾಗಿತ್ತು. ಕೂಡಲೇ ಆಟೋದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪೊಲೀಸರ ಕೈಗೆ ಸಿಕ್ಕಿಬಿದ್ದ ಸುರೇಶ್ ಮತ್ತು ಪ್ರವೀಣ್ ಎಂಬವರನ್ನು ವಿಚಾರಣೆಗೊಳಪಡಿಸಿದಾಗ ಬಿಜೆಪಿ ಪಕ್ಷಕ್ಕೆ ಸೇರಿದ ಹಣ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕರೊಬ್ಬರಿಗೆ ತಲುಪಿಸಲು ತೆಗೆದುಕೊಂಡು ಹೋಗುತ್ತಿರುವುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ.