ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹಠಾತ್ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಜಪಮಾಲೆ ಹಿಡಿದು ಮಂತ್ರಪಠಣೆ ಮಾಡಿದ್ದಾರೆ. ಚಾಮುಡೇಶ್ವರಿಯ ಪೂಜೆಯನ್ನು ನೆರವೇರಿಸಿದ್ದಾರೆ. ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ನಿಷೇಧಿಸುವ ಕುರಿತಾಗಿ ಮಾಡಲಾಗಿರುವ ಪ್ರಸ್ತಾವನೆಯು ಬಿಜೆಪಿಗರನ್ನು ಕೆರಳಿಸಿದೆ. ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಕಾಂಗ್ರೆಸ್ ಪ್ರಣಾಳಿಕೆಗಳನ್ನು ಸುಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಡಿಕೆಶಿ ಅವರು ಚಾಮುಂಡೇಶ್ವರಿಯ ಮೊರೆ ಹೋಗಿರಬಹುದೇ ಎಂದು ಹೇಳಲಾಗುತ್ತಿದೆ.
ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗರಿಗೆ ಗಾಬರಿಯಾಗಿದೆ. ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸವಿದೆ. ಬಜರಂಗದಳ ಒಂದು ರಾಜಕೀಯ ಪಕ್ಷದ ಭಾಗ. ಹುಟ್ಟುವ ಎಲ್ಲವೂ ಬಸವ ಆಗುವುದಕ್ಕೆ ಸಾಧ್ಯವಿಲ್ಲ. ಹನುಮಂತನ ಹೆಸರಿಟ್ಟುಕೊಂಡವರೆಲ್ಲಾ ಹನುಮಂತ ಆಗಲು ಸಾಧ್ಯವೇ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಬಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದಾರೆ. ಬಜರಂಗ ಬಲಿಯ ನಿಜವಾದ ಭಕ್ತರು ನಾವು. ಬಜರಂಗಿಯ ಕುಂಕುಮ ನನ್ನ ಹಣೆಯಲ್ಲಿಯೇ ಇದೆ. ಈ ನಾಡಿನಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಇತಿಹಾಸ ಸೃಷ್ಟಿಸಿದ ಆಂಜನೇಯ ದೇವಾಲಯ ಅಭಿವೃದ್ಧಿಗೆ ಕಾಂಗ್ರೆಸ್ ವಿಶೇಷ ಒತ್ತು ನೀಡಲಿದೆ. ಯುವಕರಿಗೆ ಆಂಜನೇಯನ ವಿಚಾರಗಳನ್ನು ಬೆಳೆಸಲು ವಿಶೇಷ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸಿದರು.
ಬಿಜೆಪಿಯವರು ಒಂದಾದರೂ ಆಂಜನೇಯನ ದೇವಾಲಯವನ್ನು ಕಟ್ಟಿದ್ದಾರಾ? ಯಾರಿಗೆ ಏನೂ ಸಹಾಯ ಮಾಡಿದ್ದೇವೆ, ಕೆಲಸ ಮಾಡಿದ್ದೇವೆ ಎಂದು ಪ್ರಧಾನಿಗಳು ಭಾಷಣದಲ್ಲಿ ಹೇಳುತ್ತಿಲ್ಲ. ದೇವರ ಹೆಸರಿನಲ್ಲಿ ಪ್ರಧಾನಿ ಹಾಗೂ ಬಿಜೆಪಿ ರಾಜಕೀಯ ನಡೆಸಲು ಯತ್ನಿಸುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.