ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ನಡೆಯುವ ಪ್ರಾಧಿಕಾರ ಸಭೆಗೆ ಹಾಜರಾಗುವಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ ಅವರಿಗೆ ಪತ್ರ ಬರೆಯಲಾಗಿದೆ. ಹಾಗೇ, ಮೈಸೂರು ಭಾಗದ ಶಾಸಕರು ಸಂಸದರು ಅಧಿಕಾರಿಗಳು ಕೂಡ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆದರೆ ಈ ಸಭೆಗೆ ರಾಜಮನೆತನದಿಂದ ವಿರೋಧ ವ್ಯಕ್ತವಾಗಿದೆ.
ಸಭೆಗೆ ಹಾಜರಾಗುವಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಮೋದಾದೇವಿ ಒಡೆಯರ್ ಅವರಿಗೆ ಸೂಚನಾ ಪತ್ರ ಕಳುಹಿಸಲಾಗಿದೆ. ಆದರೆ, ಪ್ರಾಧಿಕಾರದ ಸಭೆಗೆ ಪ್ರಮೋದದೇವಿ ಒಡೆಯರ್ ಅವರು ಲಿಖಿತ ಮೂಲಕವೇ ಆಕ್ಷೇಪ ವ್ಯಕ್ಯಪಡಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದ್ದು, “ಸೆ.3 ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗಿಯಾಗಲು ಸೂಚನಾ ಪತ್ರ ನೀಡಿದ್ದೀರಿ. ಪ್ರಾಧಿಕಾರದ ವಿಚಾರ ಹೈಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದೆ. ಈಗಾಗಲೆ ನ್ಯಾಯಾಲಯ ಪ್ರಾಧಿಕಾರದ ವಿಚಾರಕ್ಕೆ ತಡೆ ನೀಡಿ, ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ಹೀಗಿದ್ದರೂ ತಾವು ಸಭೆ ನಡೆಸುತ್ತಿರುವುದು ಕಾನೂನುಬಾಹಿರ. ಒಂದು ವೇಳೆ ಸಭೆ ನಡೆಸಿದರೆ ಅದು ನ್ಯಾಯಾಲಯದ ತಡೆಯಾಜ್ಞೆಯ ಉಲ್ಲಂಘನೆಯಾಗುತ್ತದೆ” ಎಂದು ಪ್ರಾಧಿಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.
ಏನಿದು ವಿವಾದ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್? ಅವರು ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಜೂ.28 ರಂದು ಆದೇಶ ಹೊರಡಿಸಿತ್ತು. ಜುಲೈ 1 ರಿಂದಲೇ ಕಾಯ್ದೆ ಜಾರಿಗೆ ಬಂದಿದೆ. ಹೀಗಾಗಿ ತಡೆಯಾಜ್ಞೆ ಮಧ್ಯಂತರ ಆದೇಶ ತೆರವು ಮಾಡಬೇಕು ಎಂದು ಮನವಿ ಮಾಡಿದರು.
ಪ್ರಮೋದಾದೇವಿ ಒಡೆಯರ್ ಪರ ವಕೀಲರು ಮತ್ತೆ ಮಧ್ಯಂತರ ಆದೇಶವನ್ನು ನೀಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣ ಸಂಬAಧ ಆಕ್ಷೇಪಣೆ ಸಲ್ಲಿಸುವಂತೆ ಒಡೆಯರ್? ಪರ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.
ಮುಖ್ಯಮAತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿಗೆ ಆಗಮಿಸುತ್ತಿದ್ದು, ಇಂದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ದೇವಿ ದರ್ಶನದ ನಂತರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.