ಮದ್ದೂರು: ತಾಲೂಕಿನ ಗಡಿಭಾಗ ನಿಡಘಟ್ಟ ಗ್ರಾಮದ ಚೆಕ್ ಪೋಸ್ಟ್ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ನಿಡಘಟ್ಟ ಹಾಗೂ ಕೊಂಗಬೋರನದೊಡ್ಡಿ ಗ್ರಾಮದಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ಸ್ಥಳಕ್ಕೆ ಅಧಿಕಾರಿಗಳೊಟ್ಟಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಿದರಲ್ಲದೇ ಕರ್ತವ್ಯ ನಿರತ ಅಧಿಕಾರಿಗಳು ಯಾವುದೇ ಲೋಪ ದೋಷಗಳು ಉಂಟಾಗದಂತೆ ಮುನ್ನೆಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.
ಮೈಸೂರು, ಬೆಂಗಳೂರು ಹೆದ್ದಾರಿ ಮಾರ್ಗದಲ್ಲಿ ಅನುಮಾನಸ್ಪದವಾಗಿ ಸಂಚರಿಸುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಿ ಬಳಿಕ ಸಂಚರಿಸಲು ಅನುವು ಮಾಡಿಕೊಡುವಂತೆ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಚೆಕ್ಪೋಸ್ಟ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕೆಂದರು.
ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು ಅಗತ್ಯವಿರುವ ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ಯಾವುದೇ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿದ್ದು ಚೆಕ್ಪೋಸ್ಟ್ಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಿ ವಿದ್ಯುತ್, ಕುಡಿಯುವ ನೀರು ಇನ್ನಿತರೆ ಸೌಲಭ್ಯ ಕಲ್ಪಿಸುವ ಜತೆಗೆ ಹೆಚ್ಚುವರಿ ಬ್ಯಾರಿಕ್ಯಾಡ್ಗಳನ್ನು ನಿರ್ಮಿಸಿ ಯಾವುದೇ ಲೋಪ ಉಂಟಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸ್ಥಳದಲ್ಲಿದ್ದ ಪೊಲೀಸರಿಗೆ ಸೂಚಿಸಿದರು.
ಈ ವೇಳೆ ಚುನಾವಣಾಧಿಕಾರಿ ಆರ್. ನಾಗರಾಜು, ತಹಸೀಲ್ದಾರ್ ಟಿ.ಎನ್. ನರಸಿಂಹಮೂರ್ತಿ, ಸಿಪಿಐ ಸಂತೋಷ್, ಪಿಎಸ್ಐ ಸಿದ್ದರಾಜು ಇತರರಿದ್ದರು.