ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿಯ ಕೋರ್ಟ್ ಸಮನ್ಸ್ ನೀಡಿದೆ.
ಆರೋಪಪಟ್ಟಿಯನ್ನು ವಿಚಾರಣೆಗೆ ಪರಿಗಣಿಸಿದ ಕೋರ್ಟ್, ಜುಲೈ 15ರಂದು ಖುದ್ದಾಗಿ ಕೋರ್ಟ್ಗೆ ಹಾಜರಾಗುವಂತೆ ಬಿಎಸ್ವೈ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್ ನೀಡಿದೆ.
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿಎಸ್ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.