ದಾವಣಗೆರೆ:- ಮಳೆಗಾಲ ಆರಂಭವಾಗುತ್ತಿದೆ ರೈತರಿಗೆ ತೊಂದರೆಯಾಗದಂತೆ ಗೊಬ್ಬರ ಬೀಜ ವಿತರಣೆ ಬಗ್ಗೆ ಕ್ರಮ ಕೈಗೊಳ್ಳಲು
ಜಿಲ್ಲಾಧಿಕಾರಿ ಹಾಗು ಜಿ.ಪಂ ಸಿಇಒಗಳಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆಯಲ್ಲಿ ಖಾಸಗಿ ಕಾರ್ಯಕ್ರಮದ ಪ್ರಯುಕ್ತ ಆಗಮಿಸಿದ್ದ ವೇಳೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರವಾಹ ಪರಿಸ್ಥಿತಿ ಬರಾದಂತೆ ಮುನ್ಸೂಚನೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಬಜೆಟ್ ತಯಾರಿಕಾ ಪೂರ್ವಭಾವಿ ಸಭೆಯನ್ನೇ ಇನ್ನೂ ನಡೆಸಿಲ್ಲ ಆದ್ದರಿಂದ ಬಜೆಟ್ ಗಾತ್ರದ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಕಳೆದ ಬಿಜೆಪಿ ಸರ್ಕಾರ ಚುನಾವಣಾ ಪೂರ್ವ ಮಂಡಿಸಿದ ಬಜೆಟ್ ಗಾತ್ರ 3.30 744 ಕೋಟಿ ರೂ ದಾಗಿತ್ತು.
ಜುಲೈ 7 ಕ್ಕೆ ರಾಜ್ಯ ಬಜೆಟ್ ಅಧಿವೇಶ ಆರಂಭವಾಗಲಿದೆ ಏಳು ದಿನಗಳಕಾಲ ಬಜೆಟ್ ಕುರಿತು ಚರ್ಚೆ ನಡೆಯಲಿದೆ ನಂತರ ಬಜೆಟ್ ಮಂಡಿಸಲಾಗುವುದು ಎಂದರು.ಕಾಕತಾಳಿಯ ಎಂಬಂತೆ ಮುಖ್ಯ ಮಂತ್ರಿಯಾದ ಮೇಲೆ ಪ್ರಥಮ ಜಿಲ್ಲಾ ಪ್ರವಾಸವಾಗಿ ದಾವಣಗೆರೆಗೆ ಆಗಮಿಸಿದ್ದೇನೆ.ದಾವಣಗೆರೆ ಜಿಲ್ಲೆಗೆ ವಿಶೇಷ ಕೊಡುಗೆ ನೀಡುವುದಾಗಿ ಇದೇ ವೇಳೆ ತಿಳಿಸಿದರು.
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಾಗುವುದು ನಂತರ ಮುಂದಿನಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಐಜಿಪಿ ಟಿ.ತ್ಯಾಗರಾಜ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ,ಜಿಲ್ಲಾ ರಕ್ಷಣಾಧಿಕಾರಿ ಕೆ.ಅರುಣ್,ಜಿ.ಪಂ ಸಿಇಒ ಸುರೇಶ್ ಇಟ್ನಾಳ್,ಜಿಲ್ಲೆಯ ಶಾಸಕರುಗಳಾದ ಕೆ.ಎಸ್ ಬಸವಂತಪ್ಪ,ಶಿವಗಂಗಾ ಬಸವರಾಜ್,ಬಿ.ದೇವೇಂದ್ರಪ್ಪ, ಡಿ.ಜಿ ಶಾಂತನಗೌಡ, ಸೈಯದ್ ಸೈಫುಲ್ಲಾ ಇತರರಿದ್ದರು.