ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕುಂಪಲ ಚಿತ್ರಾಂಜಲಿ ನಗರದಲ್ಲಿ ಹೊಸ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶದ ಐದೇ ದಿನಕ್ಕೆ ಅದೇ ಮನೆಯಲ್ಲಿ 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಶ್ವಿನಿ ಬಂಗೇರ (25) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು, ಈಕೆ ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಎಂದು ತಿಳಿದುಬಂದಿದೆ.
ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಸಾಮಾನ್ಯ ಕುಟುಂಬದವಳಾದ ಅಶ್ವಿನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿAದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು ಎನ್ನಲಾಗಿದೆ.
ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ