ಬೆಂಗಳೂರು: ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲು÷್ಯಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.
ಅಕ್ಟೋಬರ್ 15 ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನೀರು ನಿಯಂತ್ರಣ ಆಯೋಗದ ನೀಡಿದ್ದ ನಿರ್ದೇಶನವನ್ನು ಸಿಡಬ್ಲು÷್ಯಎಂಎಗೆ ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿದ್ದರು. ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿತ್ತು.
ರಾಜ್ಯದ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ 49 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಈ ನೀರು ರಾಜ್ಯದ ಕುಡಿಯುವ ನೀರು ಹಾಗೂ ನೀರಾವರಿಗೆ ಸಾಲದು. ಇಂತಹ ಸನ್ನಿವೇಶದಲ್ಲಿ ಪ್ರಾಧಿಕಾರ ನೀಡಿರುವ ಆದೇಶ ಅವೈಜ್ಞಾನಿಕ. ಆದೇಶವನ್ನು ಮರುಪರಿಶೀಲಿಸಬೇಕು ಎಂದು ರಾಜ್ಯವು ಅರ್ಜಿಯಲ್ಲಿ ಕೋರಿದೆ.ಬೆಂಗಳೂರು: ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲು÷್ಯಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.
ಅಕ್ಟೋಬರ್ 15 ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನೀರು ನಿಯಂತ್ರಣ ಆಯೋಗದ ನೀಡಿದ್ದ ನಿರ್ದೇಶನವನ್ನು ಸಿಡಬ್ಲು÷್ಯಎಂಎಗೆ ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿದ್ದರು. ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿತ್ತು.
ರಾಜ್ಯದ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ 49 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಈ ನೀರು ರಾಜ್ಯದ ಕುಡಿಯುವ ನೀರು ಹಾಗೂ ನೀರಾವರಿಗೆ ಸಾಲದು. ಇಂತಹ ಸನ್ನಿವೇಶದಲ್ಲಿ ಪ್ರಾಧಿಕಾರ ನೀಡಿರುವ ಆದೇಶ ಅವೈಜ್ಞಾನಿಕ. ಆದೇಶವನ್ನು ಮರುಪರಿಶೀಲಿಸಬೇಕು ಎಂದು ರಾಜ್ಯವು ಅರ್ಜಿಯಲ್ಲಿ ಕೋರಿದೆ.