ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಕೊಳ್ಳೇಗಾಲದ ತಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದ ದುರ್ಘಟನೆಯಲ್ಲಿ ಬಳ್ಳಾರಿ ಮೂಲದ 8 ಮಂದಿ ಮಂದಿ ಹಾಗೂ ಬಸ್ನಲ್ಲಿದ್ದ ತಾಯಿ ಮಗು ಮೃತಪಟ್ಟಿದ್ದರು.
ಪ್ರಧಾನಮಂತ್ರಿಯವರು ಮೈಸೂರು ಮತ್ತು ಧನ್ಬಾದ್ನಲ್ಲಿ ಸಂಭವಿಸಿದ ದುರಂತಗಳಲ್ಲಿ ಪ್ರಾಣ ಕಳೆದುಕೊಂಡವರ ಸಂಬAಧಿಕರಿಗೆ Pಒಓಖಈ ನಿಂದ ತಲಾ 2 ಲಕ್ಷ ರೂ. ಗಾಯಾಳುಗಳಿಗೆ ತಲಾ ರೂ. 50 ಸಾವಿರ ರೂಪಾಯಿ ಕೊಡುವುದಾಗಿ ಘೋಷಣೆ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಇನ್ನು ರಾಷ್ಟçಪತಿ ದ್ರೌಪದಿ ಮುರ್ಮು ಅವರು ಕೂಡ ಮೈಸೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಕ್ಕಳೂ ಸೇರಿದಂತೆ 10 ಮಂದಿ ಮೃತಪಟ್ಟಿದ್ದರ ಬಗ್ಗೆ ತಿಳಿದು ಮನಸ್ಸಿಗೆ ತುಂಬಾ ನೋವಾಯಿತು. ಮೃತರ ಕುಟುಂಬಗಳಿಗೆ ಆ ದೇವರು ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಜತೆಗೆ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಸೋಮವಾರ ನಡೆದ ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ತಿ. ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಲ್ಲಿ ದಾಖಲಿಸಿದ್ದಾರೆ.
ಸರ್ಕಾರ ಕ್ಷಣವೇ 10 ಲಕ್ಷ ರೂ. ಪರಿಹಾರ ನೀಡಬೇಕು: ಬಳ್ಳಾರಿಯವರು ಮಹದೇಶ್ವರ ಬೆಟ್ಟಕ್ಕೆಹೋಗುತ್ತಿದ್ದರು. ಮೈಸೂರಿನಲ್ಲಿ ಇನ್ನೋವಾ ಕಾರ್ ಬಾಡಿಗೆ ಪಡೆದು ಹೋಗುತ್ತಿದ್ದರು. ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದವರು ರಸ್ತೆಯ ಪಕ್ಕದಲ್ಲಿ ಜಂಗಲ್ ಕಟಿಂಗ್ ಮಾಡದೇ ಇದ್ದ ಕಾರಣ ಎದುರು ಬದುರು ವಾಹನಗಳಿಗೆ ಕಾಣದೇ ಇದ್ದ ಕಾರಣ ಇಂತಹ ಭೀಕರ ಅಪಘಾತ ಆಗಿದೆ. ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರವೇ ಇದರ ಹೊಣೆ ಹೊರಬೇಕು. ಅಪಘಾತದಲ್ಲಿ ಮಡಿದ ಎಲ್ಲ ಕುಟುಂಬಗಳಿಗೂ ಸರ್ಕಾರ ಕ್ಷಣವೇ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರೈತ ರತ್ನ ಕುರುಬೂರು ಶಾಂತಕುಮಾರ ಒತ್ತಾಯಿಸಿದ್ದಾರೆ.