ಕೊಡಗು:- ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮತ್ತು ಭಾರತೀಯ ಹವಾಮಾನ ಇಲಾಖೆಯಿಂದ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೆಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ದಿನಾಂಕ ೨೬-೭-೨೦೨೪ ರಂದು ರಜೆ ಘೋಷಿಸಲಾಗಿದೆ.
ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಧಿಕಗೊಂಡಿದೆ. ಇದರಿಂದ ಸಂಚಾರಕ್ಕೆ ಮಳೆ ಅಡ್ಡಿಯನ್ನುಂಟು ಮಾಡಿದ್ದು ಅಲ್ಲಲ್ಲಿ ಮರ ಗಿಡಗಳು ನೆಲಕ್ಕಚ್ಚುತ್ತಿವೆ. ಮಳೆಯೊಂದಿಗೆ ಗಾಳಿ ಕೂಡ ಜೋರಾಗಿದ್ದು ವಿದ್ಯುತ್ ಕಂಬಗಳು ಬೀಳುತ್ತಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಹೀಗಾಗಿ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ.