ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್ಗೆ ನೀಡುವ ರಾಜಾತಿಥ್ಯ ವಿಚಾರ ಸುದ್ದಿ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ. ದರ್ಶನ್ ಮತ್ತು ಇತರರನ್ನ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಿ ಎಂದು ಹೇಳಿದ್ದಾರೆ.
ರಾಜಾತಿಥ್ಯ ಸಿಕ್ಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯನವರು ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಿ ಎಂದು DGIGP ಅಲೋಕ್ ಮೋಹನ್ಗೆ ಸೂಚನೆ ನೀಡಿದ್ದಾರೆ. ಮಾತ್ರವಲ್ಲದೆ, ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.