ಮೈಸೂರು: ಇಂದು ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ಮೈಸೂರು ಮತ್ತು ಜಿಲ್ಲಾ ತೋಟಗಾರಿಕೆ ಸಂಘ(ರಿ)ದ ವತಿಯಿಂದ ನಗರದ ಕುಪ್ಪಣ್ಣ ಉದ್ಯಾನವನದಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪ, ವಿಧಾನ ಪರಿಷತ್ ನ ಪರಿಷತ್ ನ ಶಾಸಕರಾದ ಸಿ. ಎನ್ ಮಂಜೇಗೌಡ, ಕೆ. ಆರ್ ನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಿ ರವಿಶಂಕರ್, ಕೊಳ್ಳೇಗಾಲ ವಿಧಾನಸಭಾ ಶಾಸಕರಾದ ಎ.ಆರ್ ಕೃಷ್ಣಮೂರ್ತಿ,ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಸಿ.ಇ.ಒ ಕೆ.ಎಂ. ಗಾಯತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಆಶಾದ್ ಉರ್ ರೆಹಮಾನ್ ಶರೀಫ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ಇನ್ನಿತರರು ಅಧಿಕಾರಿಗಳು ಗಾಜಿನ ಮನೆಯೊಳಗೆ ನಿರ್ಮಿಸಿದ್ದಂತಹ ಶಾಕ್ಯ ರಾಜಮನೆತನ ಬೌದ್ಧ ಬೋಧನೆಗಳು ಹಾಗೂ ಬಸವಣ್ಣನವರ ಶ್ರೇಷ್ಠತೆ ಸಾರುವ ಅನುಭವ ಮಂಟಪ, ಪ್ರಜಾಪ್ರಭುತ್ವದ ನೆಲೆಯಲ್ಲಿ ರೂಪಿಸಿರುವ ಸಂಸತ್ ಭವನವನ್ನು ವೀಕ್ಷಿಸಿದರು.ಈ ಬಾರಿ ವಿಶೇಷವಾಗಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ, ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಗಳ ವಿಷಯಾಧಾರಿತವಾದ ಪುಷ್ಪ ಕಲಾಕೃತಿ ಮಾದರಿಗಳನ್ನು ಪ್ರೇಕ್ಷಕರು ನೋಡಬಹುದಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರಿನಲ್ಲಾದಂತಹ ಭದ್ರಾವತಿ ಕಾರ್ಖಾನೆ, ಶಿವನಸಮುದ್ರ ವಿದ್ಯುತ್ ಉತ್ಪಾದನೆ, ಮೈಸೂರು ವಿಶ್ವವಿದ್ಯಾಲಯ, ಹಾಗೂ ಮೈಸೂರು ಆಕಾಶವಾಣಿ ಸೇರಿದಂತೆ ಅಭಿವೃದ್ಧಿ ಸಾಧನೆಗಳ ಕುರಿತ ಪುಷ್ಪಗಳ ಮದ್ಯೆ ಇದ್ದಂತಹ ಚಿತ್ರ ಪ್ರದರ್ಶನ ನೋಡುಗರನ್ನು ಆಕರ್ಷಿಸಲಿದೆ.ಕರ್ನಾಟಕ ಸಂಭ್ರಮ: 50 ಕುಪ್ಪಳ್ಳಿ ಪಾರ್ಕ್ನ ಮುಖ್ಯದ್ವಾರದಲ್ಲಿ ಇತ್ತೀಚಿಗೆ ಸಂಭ್ರಮಿಸಿದ ಕನ್ನಡಿಗರ ಹೆಮ್ಮೆಯ ಕರ್ನಾಟಕ ಸಂಭ್ರಮ:50 ರ ಕುರಿತು ಹಳದಿ ಮತ್ತು ಕೆಂಪು ಬಣ್ಣದ ಗುಲಾಬಿ ಹೂವಿನಿಂದ ನಿರ್ಮಿಸಲಾದ ಕರ್ನಾಟಕ ಭೂಪಟ, ಎಡ ಬಲದಲ್ಲಿ ಆನೆಯ ಮಾದರಿ, ಅಲ್ಲದೆ ಹೂವಿನಿಂದ ಅರಳಿದ ಟೀಮ್ ಇಂಡಿಯಾ ವಿಶ್ವಕಪ್ ಮಾದರಿಯು ಕ್ರೀಡಾಪ್ರಿಯರನ್ನು ಸೆಳೆಯಲಿದೆ.ಈ ಬಾರಿ ಭಾರತದ ಮೊದಲ ಮಹಿಳಾ ಶಿಕ್ಷಕಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕ್ರಾಂತಿಯ ಬಗ್ಗೆ ಬೆಳಕು ಚೆಲ್ಲಿದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ, ಒಂದೇ ಮಾನವನ ದೇಹದಲ್ಲಿ ಅರ್ಧಭಾಗ ರೈತ ಇನ್ನರ್ಧ ಭಾಗ ಗಡಿ ಕಾಯುವ ಸೈನಿಕನ ಮಾದರಿ ಬಹಳ ವಿಶೇಷವಾಗಿದೆ.ಹುಲಿಯನ್ನೇರಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ಹಾಗೂ ಒಂದೇ ಗೋಪುರದಲ್ಲಿ ಅರಳಿದ ಕರ್ನಾಟಕದ ಅತೀ ದೊಡ್ಡ ದೇವಾಲಯವಾದ ನಂಜನಗೂಡಿನ ಶ್ರೀಕಂಟೇಶ್ವರ ಹಾಗೂ ಶ್ರೀ ಚಾಮುಂಡೇಶ್ವರಿ ದೇವಾಲಯವನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿರುವುದು ಭಕ್ತಿಪ್ರಿಯರನ್ನು ಕೈ ಬೀಸಿ ಕರೆಯುತ್ತದೆ. ಜನಮನಸೂರೆಗೊಳ್ಳುವಂಥ ಸುಮಾರು ವಿಭಿನ್ನ ಥೀಮ್ನೊಂದಿಗೆ ಈ ಬಾರಿಯ ಫಲಪುಷ್ಪ ಪ್ರದರ್ಶನ ಸಜ್ಜಾಗಿದ್ದು, ಅಲ್ಲದೆ ಫಲಪುಷ್ಪ ಪ್ರದರ್ಶನಕ್ಕೆ ಬಂದ0ತಹ ಪ್ರೇಕ್ಷಕರಿಗೆ ವಿವಿಧ ರೀತಿಯ ತಿಂಡಿ ತಿನಿಸುಗಳು, ಆಟಿಕೆಗಳ ವ್ಯವಸ್ಥೆ ಹಾಗೂ ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಮಳಿಗೆಗಳನ್ನು ತೆರೆಯಲಾಗಿದೆ.ಪ್ರದರ್ಶನದಲ್ಲಿ ವೈವಿಧ್ಯಮಯ ಹೂವುಗಳಲ್ಲಿ ಆಫ್ರಿಕನ್ ಮಾರಿಗೋಲ್ಡ್, ಹಳದಿ, ಆರ್ಕಿಡ್ಗಳು, ಸೆಲೋಸಿಯಾ, ಕಾರ್ನೇಷನ್, ಆಂಥೂರಿಯ0, ಗರ್ಬೆರಾ, ರೋಸಸ್, ಕಾಸ್ಮೊಸ್, ಬ್ಲೂಡೈಸಿ, ಪಿಂಗ್ ಪಾಂಗ್, ಪೆಟುನಿಯಾ, ಟೊರೆನಿಯಾ, ಡ್ರಾಕೇನಾ, ಟಿಥೋನಿಯಾ , ಜಿನ್ನಿಯಾ ಎಂಬ0ತೆ ನಾನಾ ಬಗೆಯ ಹೂವುಗಳನ್ನು ಹೇರಳವಾಗಿ ಬಳಸಲಾಗಿದೆ.