ಮದ್ದೂರು:- ದುಷ್ಕರ್ಮಿಗಳು ಮನೆ ಬಾಗಿಲು ಮುರಿದು ಒಳ ಪ್ರವೇಶಿಸಿ ನಗದು ಹಾಗೂ ಚಿನ್ನ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಸೋಂಪುರ ಗ್ರಾಮದಲ್ಲಿ ಜರುಗಿದೆ.
ತಾಲೂಕಿನ ಸೋಂಪುರ ಗ್ರಾಮದ ಸಿದ್ದೇಗೌಡ ಎಂಬುವರ ಒಂಟಿ ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿರುವ ದುಷ್ಕರ್ಮಿಗಳು ೨೪,೦೦೦ ಸಾವಿರ ನಗದು ಸುಮಾರು ೩೦ ಗ್ರಾಂ ತೂಕದ ೧ ಲಕ್ಷದ ೨೫ ಸಾವಿರ ಮೌಲ್ಯದ ಚಿನ್ನ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ,
ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವೃತ್ತ ನಿರೀಕ್ಷಕ ಸಂತೋಷ್ ಮತ್ತು ಸಿಬ್ಬಂದಿಗಳು ಅಗತ್ಯ ಮಾಹಿತಿ ಕಲೆ ಹಾಕಿದ್ದು
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.