ಮೈಸೂರು: ಅ.3ರಿಂದ ಅ.12ರವರೆಗೆ ನಡೆಯುವ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ವೇದಿಕೆ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೆÇಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ.
ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭದ್ರತೆ ಕೈಗೊಳ್ಳಲಾಗಿದೆ. ಎರಡು ಹಂತಗಳಲ್ಲಿ ಭದ್ರತೆ ಕೈಗೊಳ್ಳಲಾಗಿದ್ದು, ದಸರಾ ಉದ್ಘಾಟನೆಯಿಂದ ಅ.11ರವರೆಗೆ ಮೊದಲ ಹಂತದಲ್ಲಿ 16 ಎಸ್ಪಿ, 599 ಇತರೆ ಅಧಿಕಾರಿಗಳು, 2391 ಸಿಬ್ಬಂದಿ ಸೇರಿ ಒಟ್ಟು 2996 ಸಿಬ್ಬಂದಿ ನಿಯೋಜಿಸಲಾಗಿದೆ. ಜಂಬೂ ಸವಾರಿಯಂದು ಅರಮನೆ, ಜಂಬೂ ಸವಾರಿ ಮಾರ್ಗ, ಹಾಗೂ ಪಂಜಿನ ಕವಾಯತು ಮೈದಾನದಲ್ಲಿ 2 ಡಿಐಜಿ 27 ಎಸ್ಪಿ, 989 ಇತರೆ ಅಧಿಕಾರಿಗಳು, 3981 ಸಿಬ್ಬಂದಿ ಸೇರಿ ಒಟ್ಟು 4999 ಸಿಬ್ಬಂದಿ, 1500 ಹೋಂ ಗಾರ್ಡ್ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇದರ ಜತೆಗೆ 10 ಸಿಎಆರ್, 33 ಕೆಎಸ್ಆರ್ಪಿ, 29 ಎಎಸ್ಸಿ, 3 ಬಿಡಿಡಿಎಸ್, 1 ಗರುಡಾಪಡೆ, 1 ಐಎಸ್ಡಿ, ಸಿಐಇಡಿ ತುಕಡಿ ನಿಯೋಜಿಸಲಾಗುತ್ತಿದೆ ನಗರ ಪೆÇಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
150 ಸಿಸಿ ಕ್ಯಾಮರಾ ಅಳವಡಿಕೆ: ದಸರಾ ಭದ್ರತೆಗಾಗಿ ನಗರದಲ್ಲಿ ಈಗಾಗಲೇ ಅಳವಡಿಸಿರುವ 13140 ಕಾಯಂ ಸಿಸಿ ಕ್ಯಾಮರಾಗಳ ಜತೆಗೆ, ಹೆಚ್ಚುವರಿಯಾಗಿ ಅರಮನೆ, ಬನ್ನಿಮಂಟಪ ಮೈದಾನ, ಮೆರವಣಿಗೆ ಮಾರ್ಗ, ಇತರೇ ಪ್ರಮುಖ ಸ್ಥಳಗಳಲ್ಲಿ 150 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. 20 ಅಗ್ನಿಶಾಮಕ ದಳ, 20 ಆಂಬುಲೆನ್ಸ್ಗಳನ್ನು ನಿಯೋಜನೆ ಮಾಡಲಾಗಿದೆ. ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದ ಅಪರಾಧಿಗಳು ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಲು ನುರಿತ ಅಪರಾಧ ವಿಭಾಗದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.
ಮೊಬೈಲ್ ಕಮಾಂಡ್ ವಾಹನ ಬಳಕೆ: ಮೊಬೈಲ್ ಕಮಾಂಡ್ ಸೆಂಟರ್ನ್ನು ಈ ಬಾರಿಯ ದಸರಾ ಮಹೋತ್ಸವದಲ್ಲಿ ಬಳಲಾಗುತ್ತದೆ. ಬಸ್ನಲ್ಲಿ ಸಿಸಿಟಿವಿ ವ್ಯವಸ್ಥೆ ಇದ್ದು, ಬಾಡಿವೋರ್ನ್ ಕ್ಯಾಮರಾಗಳು, ಲಾಂಗ್ ಡಿಸ್ಟೆನ್ಸ್ ವಿಡಿಯೋಗ್ರಫಿ ಮತ್ತು ಫೆÇೀಟೋಗ್ರಫಿ ವ್ಯವಸ್ಥೆ ಇರುತ್ತದೆ. ಅರಮನೆ ಮತ್ತು ಬನ್ನಿ ಮಂಟಪದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿಪೆÇೀರ್ಸ್ ಕ್ಯಾಮರಾ ವಿತರಿಸಲಾಗುತ್ತದೆ. ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮರಾಗಳಿಂದ ಕಣ್ಗಾವಲು ಮಾಡಲಾಗುವುದು. ಪ್ರಮುಖ ಸ್ಥಳಗಳಲ್ಲಿ ಪೆÇಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಪ್ಲಾಟ್ ಫಾಮ್ರ್ಗಳನ್ನು ನಿರ್ಮಿಸಿ ಅದರ ಮೇಲೆ ಪೆÇಲೀಸರನ್ನು ಮೆಗಾ ಫೆÇೀನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದರು.
ರೌಡಿ ಶೀಟರ್ಗಳು, ಗೂಂಡಾ ಕಮ್ಯೂನಲ್ ಗೂಂಡಾಗಳ ವಿರುದ್ಧ ಮುಂಜಾಗೃತ ಕ್ರಮವಾಗಿ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಚಾಮುಂಡಿ ಪಡೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.