ಹೊಸಕೋಟೆ: ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಒಬ್ಬ ಯವತಿಯೊಬ್ಬರು ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ವರದಿಯಾಗಿದೆ. ಇನ್ನು ವ್ಗೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ದೇವನಹಳ್ಳಿ ಬಳಿ ನಡೆದಿದೆ.
ಹೊಸಕೋಟೆ ಬಳಿಯ ಕೋಲಾರ ರಾಷ್ಟಿçÃಯ ಹೆದ್ದಾರಿಯಲ್ಲಿ ಮಂಗಳವಾರ ದಿನ ಈ ದುರ್ಘಟನೆ ನಡೆದಿದೆ. ಮೈಲಾಪುರ ಚನ್ನಾಪುರ ರಸ್ತೆಯಲ್ಲಿ 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಲ್ಲಿ ಪುಂಡರು ವ್ಹೀಲಿಂಗ್ ನಡೆಸುತ್ತಿದ್ದರು. ಈ ವೇಳೆ ಅಪಘಾತವಾಗಿ ಯುವತಿಯೊಬ್ಬಳು ಬೈಕ್ ನಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೊಸಕೋಟೆ ಎಂಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಯುವತಿಯ ದೇಹವನ್ನು ಹೊಸಕೋಟೆಯ ಸರ್ಕಾರಿ ಆಸ್ವತ್ರೆಗೆ ರವಾನಿಸಲಾಗಿದ್ದು ಆಕೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿಯಲ್ಲಿ ಯುವಕ ಸಾವು
ಇನ್ನು ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ವ್ಹೀಲಿಂಗ್ ನಡೆಸುತ್ತಿದ್ದ ಯುವಕನೊಬ್ಬ ಮತ್ತೊಂದು ಬೈಕಿಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಸಮೀಪ ನಡೆದಿದೆ. ಬೆಂಗಳೂರು ಮೂಲದ ಆದಿಲ್(25) ಮೃತಪಟ್ಟ ಯುವಕನಾಗಿದ್ದು ಘಟನೆಯಲ್ಲಿ ಮತ್ತೊಬ್ಬ ಸವಾರ ಗಾಯಗೊಂಡಿದ್ದಾನೆ.
ಸ್ವಾತAತ್ರ÷್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಹೊರವಲಯದ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಮಿತಿಮೀರಿದ್ದು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.