ಕನಕಪುರ: ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ.
ಇದನ್ನೂ ಓದಿ:ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಯುವಕರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಎ೦೧ಎಂಎಫ್ ೮೦೫೫ ಸಂಖ್ಯೆಯ ಟೊಯೊಟೊ ಕ್ವಾಲಿಸ್ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ವೇಳೆ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಕ್ರೇನ್ ಮೂಲಕ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ.
ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಗಣಪತಿ ವಿಸರ್ಜನೆ ಆಟ: ಬಾವಿಗೆ ಬಿದ್ದ ಮಗು ಸಾವು