ಮಂಡ್ಯ:ಶಕ್ತಿ ಯೋಜನೆ ಹಿನ್ನೆಲೆ ಬಸ್ ಸಾಕಷ್ಟು ಭರ್ತಿಯಾಗಿ ಸಂಚರಿಸುತ್ತಿವೆ.ನಿಲ್ದಾಣಗಳಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಸ್ಗಳಲ್ಲಿ ನೂಕುನುಗ್ಗಲು, ಕಾಲಿಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬಸ್ ಫುಲ್ ರಶ್ ಇರುವ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ನಿಂದ ವ್ಯಕ್ತಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಚಲುವೇಗೌಡ (75) ಮೃತ ವ್ಯಕ್ತಿ. ಇವರು ಹರಕನಕೆರೆ ಗ್ರಾಮದ ನಿವಾಸಿಯಾಗಿದ್ದರು.ಬಸ್ ರಶ್ ಇದ್ದ ಕಾರಣ ಬಾಗಿಲ ಬಳಿ ನಿಂತಿದ್ದರು. ಬಸ್ಗೆ ಡೋರ್ ಇಲ್ಲದ ಕಾರಣ ಡೋರ್ ಮೆಟ್ಟಿನ ಬಳಿನಿಂತಿದ್ದ ವ್ಯಕ್ತಿ, ರಸ್ತೆಯಲ್ಲಿದ್ದ ಗುಂಡಿಗೆ ಬಸ್ ಅಲ್ಲಾಡಿದ ಚೇಳೆ ನಿಯಂತ್ರಣ ತಪ್ಪಿ ಬಸ್ನಿಂದ ಬಿದ್ದಿದ್ದಾರೆ. ಬಸ್ ವೇಗವಾಗಿ ಚಲಿಸುತ್ತಿದ್ದರಿಂದ ರಸ್ತೆಗೆ ಬಿದ್ದ ರಭಸಕ್ಕೆ ವ್ಯಕ್ತಿಯ ತಲೆಗೆ ಪೆಟ್ಟು ಬಿದ್ದು, ತೀವ್ರ ರಕ್ತ ಸ್ರಾವದಿಂದ ವ್ಯಕ್ತಿ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
2.5 ಲಕ್ಷ ರೂ.ಪರಿಹಾರ ಘೋಷಣೆ: ಸ್ಥಳಕ್ಕೆ ಬಂದ ಅಧಿಕಾರಿಗೆ ಸಾರ್ವಜನಿಕರಿಂದ ತರಾಟೆ ತೆಗೆದುಕೊಂಡಿದ್ದಾರೆ.ಬಾಗಿಲು ಇಲ್ಲದ ಬಸ್ ಸಂಚಾರಕ್ಕೆ ಬಿಟ್ಟಿದ್ದು ಯಾಕೆ? ಆರ್ ಟಿಒಯಿಂದ ಬಾಗಿಲಿಲ್ಲದ ಬಸ್ ಸಂಚಾರಕ್ಕೆ ಆನುಮತಿ ಕೊಟ್ಟಿದ್ದಾರಾ? ಈ ದುರ್ಘಟನೆಗೆ ಯಾರು ಹೊಣೆ ಎಂದು ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರಿಂದ ಕೆಎಸ್ಆರ್ಟಿಸಿಯದ್ದೇ ತಪ್ಪೆಂದು ಒಪ್ಪಿಕೊಂಡ ಅಧಿಕಾರಿ, ನಿಗಮದಿಂದ 2.5 ಲಕ್ಷ ಪರಿಹಾರದ ಭರವಸೆ ನೀಡಲಾಗಿದೆ. ಜೊತೆಗೆ, ಸ್ಥಳದಲ್ಲೇ 25 ಸಾವಿರ ರೂ. ಪರಿಹಾರ ನೀಡಲಾಗಿದೆ.