ದೆಹಲಿ:- ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದೆವೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬಿಜೆಪಿಗೆ ಶಾಕ್ ಕೊಟ್ಟರು.
ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಮೂಡಾ ಮತ್ತು ವಾಲ್ಮೀಕಿ ಹಗರಣ ವಿರುದ್ಧವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದೆವೆ.
ಜೆ.ಟಿ ದೇವೆಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ನಿರ್ಧಾರ ತೆಗೆದುಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.