ಬೆಂಗಳೂರು:- ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ‘ಬೃಹತ್ ಬೆಂಗಳೂರು ಪ್ರಾಧಿಕಾರ’ ಮಾಡಲು ನಿರ್ಧಾರ ಮಾಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರನ್ನು ಐದು ಭಾಗವನ್ನಾಗಿ ಮಾಡುವ ವಿಧೇಯಕಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವುದಕ್ಕೂ ಅನುಮೋದನೆ ದೊರಕಿದೆ.
ನಾಳೆಯೇ ವಿಧಾನಸಭೆಯಲ್ಲಿ ಈ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಆಡಳಿತ ನಿರ್ವಹಣೆಗೆ ಈಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲು ‘ಬೃಹತ್ ಬೆಂಗಳೂರು ಪ್ರಾಧಿಕಾರ’(BBA) ರಚಿಸುವುದು. ಬೆಂಗಳೂರಿನ ಅಭಿವೃದ್ಧಿ ಯೋಜನೆಗಳು ಮತ್ತು ಹಣಕಾಸು ನಿರ್ವಹಣೆಯಲ್ಲಿ ಉನ್ನತ ಅಧಿಕಾರ ಹೊಂದಿರುವ ಈ ಪ್ರಾಧಿಕಾರಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ. ಎರಡನೇ ಹಂತದಲ್ಲಿ ಈ ಪ್ರಾಧಿಕಾರದ ಅಡಿಯಲ್ಲಿ ಬಿಬಿಎಂಪಿಯನ್ನು ವಿಭಜಿಸಿ ಸರ್ಕಾರ ರಚಿಸುವ ಹೊಸ ಪಾಲಿಕೆಗಳು ಇರಲಿವೆ. ಪ್ರತಿ ಪಾಲಿಕೆಗೂ ಪ್ರತ್ಯೇಕ ಮೇಯರ್, ಉಪಮೇಯರ್ ಸೇರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದ ಆಡಳಿತ ವ್ಯವಸ್ಥೆ ಇರುತ್ತದೆ.