ಬೆಂಗಳೂರು: ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.
ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತಡೊಗಿದ್ದಾರೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
10ಕ್ಕೂ ಹೆಚ್ಚು ಕಡೆ ದಾಳಿ: ಬೆಂಗಳೂರಿನ ವಿಜಯನಗರದಲ್ಲಿ ವೈದ್ಯೆ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಶಾಂತನಗರದ ವೈದ್ಯೆ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಮೇಕ್ರಿ ಸರ್ಕಲ್ ಬಳಿಯ ಗಜರಾಜ ಜ್ಯುವೆಲರ್ಸ್ ಮೇಲೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಅಂಗಡಿ ಬಾಗಿಲು ಮುಚ್ಚಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಅದಾಗಿ ಭರ್ತಿ ವಾರದ ನಂತರ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.