ಗಾಂಧಿನಗರ: ಶಾಲೆಯ ಮೊದಲನೇ ಮಹಡಿಯ ಕ್ಲಾಸ್? ರೂಮ್?ನಲ್ಲಿ ಕುಳಿತು ಊಟ ಮಾಡುವಾಗ ಗೋಡೆ ಕುಸಿದು ಬಿದ್ದ ಪರಿಣಾಮ 5 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಜರಾತ್?ನ ವಡೋದರದ ಶ್ರೀ ನಾರಾಯಣ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.
ವಡೋದರಾದ ಶ್ರೀ ನಾರಾಯಣ ವಿದ್ಯಾಲಯದಲ್ಲಿ ಎಂದಿನಂತೆ ತರಗತಿ ಆರಂಭವಾಗಿದ್ದವು. ಅದರಂತೆ ಮಧ್ಯಾಹ್ನದ ವೇಳೆ ಎಲ್ಲಾ ಮಕ್ಕಳನ್ನು ಊಟಕ್ಕೆ ಬಿಡಲಾಗಿತ್ತು. ಈ ವೇಳೆ 7ನೇ ತರಗತಿ ಮಕ್ಕಳು ಮೊದಲನೇ ಮಹಡಿಯ ಕೊಠಡಿಯಲ್ಲಿ 12:30ರ ಸುಮಾರಿಗೆ ಕುಳಿತು ಊಟ ಮಾಡುತ್ತಿದ್ದರು. ಆಗ ಆಕಸ್ಮಿಕವಾಗಿ ಒಂದು ಬದಿಯ ಗೋಡೆ ಕುಸಿದು ಬಿದ್ದಿದೆ. ಇದರಿಂದ ಕೊಠಡಿಯಲ್ಲಿದ್ದ ಸುಮಾರು ಮಕ್ಕಳ ಪೈಕಿ 5 ವಿದ್ಯರ್ಥಿಗಳಿಗೆ ಗಂಭೀರವಾದ ಗಾಯಗಳು ಆಗಿವೆ. ಮಕ್ಕಳ ಸೈಕಲ್ ಮೇಲೆ ಗೋಡೆ ಬಿದ್ದಿದ್ದರಿಂದ 10 ರಿಂದ 12 ಸೈಕಲ್ ನಜ್ಜುಗುಜ್ಜಾಗಿವೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಗಾಯಗೊಂಡಂತಹ ಮಕ್ಕಳ ಪೋಷಕರು ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಶಾಲೆಯನ್ನು ಟ್ರಸ್ಟ್ವೊಂದು ನಡೆಸುತ್ತಿದೆ. ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣೆ ಕಾರ್ಯದಲ್ಲಿ ತೊಡಗಿದ್ದರು ಎಂದು ಹೇಳಲಾಗಿದೆ.
https://twitter.com/ItsKhan_Saba/status/1814495048752681347/video/1