ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಭಾರೀ ಮಳೆ ಸುರಿದ ಪರಿಣಾಮ ಪಿಎಸ್ ಕಾಲೇಜ್ ಬಳಿಯ ವೀರಭದ್ರನಗರದ ಸ್ಲಮ್ನಲ್ಲಿ 5 ಮನೆಗಳು ಮತ್ತು ಕಾಂಪೌಂಡ್ ಗೋಡೆ ಕುಸಿದು ಪಕ್ಕದ ಅಪಾರ್ಟ್ಮೆಂಟ್ನಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದೆ.
ರಿಂಗ್ ರೋಡ್ನ ವೀರಭದ್ರೇಶ್ವರ ನಗರದಲ್ಲಿ ಈ ಘಟನೆ ನಡೆದಿದ್ದು, ವಸುಂಧರಾ ಕೃತಿಕಾ ಅಪಾರ್ಟ್ಮೆಂಟ್ನ ತಡೆಗೋಡೆ ಸಮೇತ ಮನೆ ಸಂಪೂರ್ಣ ನೆಲಸಮವಾಗಿದೆ. ಅಲ್ಲದೇ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ಮತ್ತೆರಡು ಕಾರಗಳಿಗೂ ಸಹ ಹಾನಿಯಾಗಿದೆ.
ಗೋಪಾಲ್ ಎಂಬುವವರ ಮನೆ ಸಂಪೂರ್ಣ ಕುಸಿದು ಹಾನಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ನೆಲಸಮಗೊಂಡಿವೆ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ್ದರಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ. ಘಟನೆಯಲ್ಲಿ ಯಾರಿಗೂ ಸಹ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.