ಮೈಸೂರು: ಹಿಂದಿನ ಅವಧಿಯಲ್ಲಿ ಅನಧಿಕೃತವಾಗಿ ಸರ್ಕಾರಕ್ಕೆ ನಷ್ಟ ಉಂಟು ಮಾಡುವ ರೀತಿಯ ಅಕ್ರಮ ನಡೆಸಿದ್ದಾರೆಂದು ಆರೋಪಿಸಿದ ದೂರಿನ ಮೇರೆಗೆ ಮಾಜಿ ಮುಡಾ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಎಚ್.ವಿ.ರಾಜೀವ್ ಹಾಗೂ ಹಿಂದಿನಿ ಮುಡಾ ಆಯುಕ್ತರಾಗಿದ್ದ ನಟೇಶ್ ಸೇರಿ ಹಲವರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.