ಚಾಮರಾಜನಗರ: ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ. ಅದಕ್ಕೂ ಡಿ.ಕೆ.ಶಿವಕುಮಾರ್ ಅವರಿಗೂ ಸಂಬಂಧವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಮುಡಾ ಪ್ರಕರಣವನ್ನು ಈಗಾಗಲೇ ಇಬ್ಬರು ಐಎಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಗರಣ ಎಂದೇ ಸಾಬೀತಾಗಿಲ್ಲ. ಸಿಬಿಐಗೆ ಏಕೆ ವಹಿಸಬೇಕು. ನಮ್ಮ ರಾಜ್ಯದಲ್ಲಿ ಪೆÇಲೀಸರು ಇಲ್ಲವೇನು. ಬಿಜೆಪಿಯವರು ಅವರ ಅವಧಿಯಲ್ಲಿ ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟು ಏನು ಮಹಾ ಕೆಲಸ ಮಾಡಿದ್ದಾರೆ. ಅವರೆಷ್ಟು ಸಿಬಿಐಗೆ ಕೊಟ್ಟಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಅವರು ಹೇಳಿದಂತೆ ಮಾಡಲು ಸಾಧ್ಯವಿಲ್ಲ. ಸರ್ಕಾರವಿದೆ ತನ್ನದೇ ರೀತಿ ನೀತಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದರು.
ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾರೆ. ರಾಮನಗರವನ್ನು ಬೆಂಗಳೂರಿಗೆ ಸೇರ್ಪಡೆಮಾಡುವ ವಿಚಾರವಾಗಿ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನಮಗೆ ಗೊತ್ತಿಲ್ಲ. ನಿರ್ಧಾರ ತೆಗೆದುಕೊಂಡ ಬಳಿಕ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಬೈರತಿ ಸುರೇಶ್ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಕಿಡಿಕಾರಿದ್ದ ಶಾಸಕ ಎಚ್.ವಿಶ್ವನಾಥ್ ಹೇಳಿಕೆಗೆ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು, ಏ.. ಯಾರ್ರಿ ಅವ್ನು? ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ?. ಅವ್ನು ಅವನ ಮಗ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೆÇ?ಟೊ ನನ್ನ ಬಳಿ ಇದೆ. ಅವ್ನು ಏಕವಚನ ಬಳಸಿದ್ರೆ ನನಗೆ ಅದಕ್ಕಿಂತ ಹೆಚ್ಚಿಗೆ ಮಾತನಾಡೋಕೆ ಬರುತ್ತೆ. ನಾನು ಹಳ್ಳಿಯಲ್ಲೇ ಹುಟ್ಟಿ ಬೆಳೆದಿರೋದು. ಮೊದ್ಲು ಮರ್ಯಾದೆ ಕೊಟ್ಟು ಮರ್ಯಾದೆ ತೆಗೆದುಕೊಳ್ಳಲಿ. ವಿಶ್ವನಾಥ್ ಥರ ನಾನು ರೋಲ್ ಕಾಲ್ ಗಿರಾಕಿ ಅಲ್ಲ. ವಯಸ್ಸಾಗಿದೆ ಅಂತ ಅಷ್ಟೇ ಬೆಲೆ ಕೊಡ್ತೀವಿ. ಅದನ್ನು ಉಳಿಸಿಕೊಳ್ಳಲಿ ಎಂದು ಆಕ್ರೋಶ ಹೊರ ಹಾಕಿದರು.