ಮೈಸೂರು : ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂನ ಮನೆಯೊಂದರಲ್ಲಿ ನಡೆದಿದೆ.
ಗಂಡ-ಹೆಂಡತಿ, ಇಬ್ಬರು ಮಕ್ಕಳ ಕುಟುಂಬವದು. ಎರಡು ತಿಂಗಳ ಹಿಂದೆಯಷ್ಟೇ ಬಾಡಿಗೆಗೆ ಬಂದಿದ್ದರು. ಹೀಗೆ ಬಾಡಿಗೆಗೆ ಬಂದವರು ಯಾರು ಎಂಬುದು ಅಕ್ಕ ಪಕ್ಕದ ಮನೆಯವರಿಗೆ ಗೊತ್ತಿರಲಿಲ್ಲ. ಅಷ್ಟರಲ್ಲೇ ಅವರೆಲ್ಲ ಒಟ್ಟಿಗೆ ಶವವಾಗಿದ್ದಾರೆ. ಮೈಸೂರಿನಲ್ಲಿ (ಒಥಿsuಡಿu) ಇಂತಹ ದಾರುಣ ಘಟನೆ ನಡೆದಿದೆ.
ಕುಟುಂಬದ ಮಹದೇವಸ್ವಾಮಿ (48), ಅನಿತಾ (35), ಮಕ್ಕಳಾದ ಚಂದ್ರಕಲಾ (17), ಧನಲಕ್ಷ್ಮಿ (15) ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ.
ಮಹದೇವಸ್ವಾಮಿ ಮೂಲತಃ ಮೈಸೂರು ತಾಲೂಕಿನ ಬರಡನಪುರ ಗ್ರಾಮದವರು. ಮೈಸೂರಿನ ಬಂಡಿಪಾಳ್ಯದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಅವರದ್ದೇ ಸ್ವಂತ ಅಂಗಡಿ ಇತ್ತು. ಮೈಸೂರಿನ ಚಾಮುಂಡಿಪುರಂಗೆ ಎರಡು ತಿಂಗಳ ಹಿಂದೆ ಬಂದಿದ್ದರು. ಇದೀಗ ನಾಲ್ವರ ಶವ ಮನೆಯ ಒಳಗೆ ಪತ್ತೆಯಾಗಿದೆ.
ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ ಉಳಿದವರ ಶವಗಳು ಕೆಳಗೆ ಬಿದ್ದಿವೆ. ಇವರೆಲ್ಲಾ ಎರಡು ದಿನದ ಹಿಂದೆಯೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಂದು ಶವಗಳ ಕೊಳೆತ ವಾಸನೆಯಿಂದ ಅನುಮಾನಗೊಂಡ ಅಕ್ಕಪಕ್ಕದವರು ಪೆÇಲೀಸರಿಗೆ ವಿಚಾರ ತಿಳಿಸಿದ್ದಾರೆ.
ಕೆ.ಆರ್ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪೆÇಲೀಸರ ತನಿಖೆಯ ನಂತರವೇ ಈ ಕುಟುಂಬದ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಸದ್ಯ ಪೆÇಲೀಸ್ ಆಯುಕ್ತ ರಮೇಶ್ ಬಾನೋತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಕುರಿತಾಗಿ ವಿದ್ಯಾರಣ್ಯಪುರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.