ಬೆಂಗಳೂರು: ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಈ ಹಿಂದೆ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಈ ತಿಂಗಳ 30 ರಂದು ಮೈಸೂರಿಗೆ ರಾಹುಲ್ ಭೇಟಿ ನೀಡಲಿದ್ದು, ಅದೇ ದಿನ ಗೃಹಲಕ್ಷಿ÷್ಮ ಯೋಜನೆಗೆ ಚಾಲನೆ ದೊರೆಯಲಿದೆ. ಐದು ಗ್ಯಾರಂಟಿಗಳಲ್ಲೊAದಾದ ಗೃಹಲಕ್ಷ್ಮೀ ಯೋಜನೆಗೆ ಈ ಮೂಲಕ ಚಾಲನೆ ದೊರೆಯಲಿದೆ. ಈ ಯೋಜನೆಯ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆಯಾಗಲಿದೆ.