ಮೈಸೂರು:- ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕು. ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಿಎಸ್ ಯಡಿಯೂರಪ್ಪ, ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು. ಮಗನ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರು ಚಲೋ ಯಶಸ್ಸಿನ ಹಿನ್ನಲೆ ಪೂಜೆ ಸಲ್ಲಿಕೆ ಮಾಡಿದರು. ಮೈಸೂರು ಚಲೋ ಮೈಸೂರು ಎಂಟ್ರಿ ಅಗ್ತಿದಂತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದು ನಾಳೆ ಮೈಸೂರಿನಲ್ಲಿ ಬಿಜೆಪಿ ಜೆಡಿಎಸ್ ಸಮಾರೋಪ ಸಮಾವೇಶ ನಡೆಯಲಿದೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಭ್ರಷ್ಟ ಸರ್ಕಾರವನ್ನ ಕಿತ್ತೊಗೆಯಬೇಕಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಬಿ.ವೈ.ವಿಜಯೇಂದ್ರ ನಿರಂತರ ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆ ಈವತ್ತು ಮೈಸೂರು ತಲುಪುತ್ತಿದೆ. ಎಲ್ಲಾಕಡೆ ನಿರೀಕ್ಷೆಗೂ ಮೀರಿದ ಜನ ಬೆಂಬಲ, ಪ್ರತಿಕ್ರಿಯೆ ಸಿಕ್ಕಿದೆ. ನಮ್ಮ ಉದ್ದೇಶ ಭ್ರಷ್ಟ ಸರ್ಕಾರ ಕಿತ್ತು ಹೋಗಬೇಕು. ನಿರಂತರ ಪಾದಯಾತ್ರೆ ಮಾಡುತ್ತಿರುವುದು ನಮಗೆ ಅನುಕೂಲವಾಗುತ್ತಿದೆ. ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ಕಾರ್ಯಕ್ರಮ. ರಾಜ್ಯದಲ್ಲಿ ಹೊಸ ಸರ್ಕಾರ ಬರಬೇಕು. ನಾಡಿನ ಜನರು ಗೌರವ, ನೆಮ್ಮದಿ, ಸ್ವಾಭಿಮಾನದಿಂದ ಬದುಕಬೇಕು. ಚಾಮುಂಡಿತಾಯಿ ಆ ನಿಟ್ಟಿನಲ್ಲಿ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದರು.
ಕಾಂಗ್ರೆಸ್ ಪಕ್ಷದವರು ಬಿಜೆಪಿ ವಿರುದ್ಧ ಮಾಡಲಿರುವ ಆರೋಪಕ್ಕೆ ತಿರುಗೇಟು ನೀಡಿದ ಬಿಎಸ್ ಯಡಿಯೂರಪ್ಪ, ದಯಮಾಡಿ ಅವರು ಎಲ್ಲವನ್ನೂ ಹೇಳಲಿ. ಅವರು ಸ್ವತಂತ್ರರಿದ್ದಾರೆ, ಅದನ್ನ ತಡೆಯಲು ನಾವ್ಯಾರು ಎಂದರು.
ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ ಸಮಾವೇಶ ಕುರಿತು ಪ್ರತಿಕ್ರಿಯಿಸಿದ ಬಿಎಸ್ ವೈ ಸಮಾವೇಶ ಮಾಡಿಕೊಳ್ಳಲಿ ಬಿಡಿ ಅದರಿಂದ ನಮಗೇನೂ ತೊಂದರೆ ಇಲ್ಲ ಎಂದರು.
ಬಿಎಸ್ ವೈ ಅವರು ಮನೆಯಲ್ಲಿರಲಿ. ಪೆÇೀಸ್ಕೋ ಪ್ರಕರಣದಲ್ಲಿ ಮುಜುಗರಕ್ಕೆ ಒಳಗಾಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಬಿಎಸ್ ವೈ, ದಯಮಾಡಿ ಎಲ್ಲವನ್ನೂ ಹೇಳಲಿ ನಮಗೇನೂ ತೊಂದರೆ ಇಲ್ಲ ಎಂದರು.