ಮೈಸೂರು: ರಾಜ್ಯದಲ್ಲಿ ಹೊಸ ಹೊಸ ಟ್ಯಾಕ್ಸ್ ಗಳು ಆರಂಭವಾಗಿವೆ ಎಂದು ಮಾಜಿ ಮುಖ್ಯಮಂತ್ರಿ
ಕುಮಾರಸ್ವಾಮಿ ಪುನರುಚ್ಚಾರ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಟ್ಯಾಕ್ಸ್ ನೀಡಿದರೆ ಮಾತ್ರ ಇವರಿಗೆ ಲಾಭ. ಅದರಲ್ಲೂ ಮತ್ತೆ ವೈಎಸ್ಟಿ ಟ್ಯಾಕ್ಸ್ ಬಗ್ಗೆ ಉಲ್ಲೇಖಮಾಡಿ ವೈಎಸ್ಟಿ ಟ್ಯಾಕ್ಸ್ ಬಗ್ಗೆ ಎಲ್ಲಾ ರಾಜಕಾರಣಿಗಳಿಗೂ ಗೊತ್ತಿದೆ.
ನನಗೂ ಯಾರೋ ಈ ಬಗ್ಗೆ ಹೇಳಿದರು.
ವೈಎಸ್ಟಿ ಅಂದರೆ ಏನು ಪ್ರಶ್ನೆಗೆ ಜಾಣ್ಮೆಯ ಉತ್ತರ.
ನನಗೂ ಸರಿಯಾಗಿ ಗೊತ್ತಿಲ್ಲ ಬ್ರದರ್.
ಈ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡುತ್ತಾರೆ.
ಪೆನ್ ಡ್ರೈವ್ ರಹಸ್ಯ ಹೇಳಿದ ಹೆಚ್ಡಿಕೆ.
ಪೆನ್ ಡ್ರೈವ್ ದಾಖಲೆಯನ್ನ ಸೂಕ್ತ ಸಮಯದಲ್ಲಿ ಮಾತನಾಡುವೆ.
ಈ ಸರ್ಕಾರ ಏನು ಮಾತಾಡಬೇಕು ಎಲ್ಲವನ್ನೂ ಮಾತನಾಡಲಿ.
ಹಿಟ್ ಅಂಡ್ ರನ್ ಅಂತಾರೆ. ಏನಾದರೂ ಹೇಳಿಕೊಳ್ಳಲಿ ಅಂತಾರೆ.
ಅವರು ಹೀಗೆ ಮಾತನಾಡುತ್ತಿರಲಿ. ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡ್ತೀನಿ.
ವರ್ಗಾವಣೆ ದಂಧೆ ಸಿಎಂ ನೇತೃತ್ವದಲ್ಲೇ ನಡೆಯುತ್ತಿದೆ.
ಅವರ ಮೂಲಕವೇ ವರ್ಗಾವಣೆ ಆದೇಶ ಆಗುತ್ತದೆ.
ತಕ್ಷಣ ಅದು ಬದಲಾವಣೆ ಆಗುತ್ತದೆ.
ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಅನಿವಾರ್ಯ.
ಆದರೆ ಯಾವ ಅಳತೆಗೋಲು ಇಟ್ಟುಕೊಂಡು ವರ್ಗಾವಣೆ ಮಾಡುತ್ತಿದ್ದೀರಿ.
ಇಷ್ಟೊಂದು ಅನುಭವ ಇಟ್ಕೊಂಡು ನಿಮಗೆ ಗೊತ್ತಿಲ್ಲ.
ಪ್ರಮುಖ ಎಲ್ಲಾ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗ್ತಿವೆ.
ಬಿಜೆಪಿಯವರು ವಿಪಕ್ಷ ಸ್ಥಾನದಲ್ಲಿದ್ದಾರೆ.
ನಾವು ಕೂಡ ವಿಪಕ್ಷ ಸ್ಥಾನದಲ್ಲಿ ಇದ್ದೇವೆ.
ಹೋರಾಟದಲ್ಲಿ ಒಬ್ಬರಿಗೊಬ್ಬರು ಸಹಕಾರ ಪಡೆಯುತ್ತೇವೆ.
ಬಿಜೆಪಿಯಲ್ಲಿ ಹಲವರು ಸಮರ್ಥ ನಾಯಕರಿದ್ದಾರೆ.
ಬಿಜೆಪಿಯಲ್ಲಿಯೇ ವಿಪಕ್ಷ ನಾಯಕರು ಆಗುವವರು ಇದ್ದಾರೆ.
ನನ್ನ ಆಸ್ತಿಯನ್ನು ಕುರಿತು ಇಂಟರ್ನ್ಯಾಷನಲ್ ಸಂಸ್ಥೆಯಿಂದ ತನಿಖೆ ನಡೆಸಲಿ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ.
ಜಗದೀಶ್ ಸದ್ಯ ವೆಂಟಿಲೇಟರ್ನಲ್ಲಿ ಇದ್ದಾರೆ.
ಸರ್ಕಾರ ಬಂದು ಐವತ್ತು ದಿನ ಆಗಿಲ್ಲ.
ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ.
ಆದರೆ ಈ ರೀತಿ ಮಾಡುವುದು ಸರಿಯಲ್ಲ.
ಜಗದೀಶ್ ಪತ್ನಿ ಪಂಚಾಯತ್ ಸದಸ್ಯರು.
ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ನೀಸಲಾತಿ ಬಂದಿದೆ.
ಆದರೆ ಇನ್ನೂ ಒಂದು ತಿಂಗಳಾಗಿಲ್ಲ
ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ.
ಊರಿನಲ್ಲಿರುವ ರೌಡಿ, ಚೇಲಾ ಮಹದೇವ ಎಂಬಾತ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ.
ಈ ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಏರಿದ್ದಾನೆ.
ಮತ್ತೊಂದೆಡೆ ಜಗದೀಶ್ ಗೆ ಅಧಿಕಾರಿಗಳ ಮೂಲಕ ಕಿರುಕುಳ.
ಡೆತ್ ನೋಟ್ನಲ್ಲಿ ಜಗದೀಶ್ ಅವರು ಸ್ಪಷ್ಟವಾಗಿ ಬರೆದಿದ್ದಾರೆ.
ಸಚಿವರ ಆದೇಶ ಇದೆ, ಒತ್ತಡ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಅವರನ್ನ ಮಂತ್ರಿ ಸ್ಥಾನದಿಂದ ಕೆಳಗಿಳಿಸಿ
ಮಂತ್ರಿ ಸ್ಥಾನ ಏನು ಶಾಶ್ವತಾನ?
ಘಟನೆ ಸಂಬಂಧ ಅಧಿಕಾರಿಗಳನ್ನ ಕೇಳಿದರೆ ಇನ್ನೂ ವ್ಯಕ್ತಿ ಸತ್ತಿಲ್ಲ.
ಆ ಕಾರಣಕ್ಕೆ ಎಫ್ಐ ಆರ್ ಹಾಕಿಲ್ಲ ಅಂತಾರೆ.
ಇವರಿಗೆ ಮತ ಹಾಕಿದ್ದು ಜನರ ಜೀವದ ಜೊತೆ ಚೆಲ್ಲಾಟ ಆಡಲು ಅಲ್ಲ ನೆನ್ನೆ ಅವರ ಕುಟುಂಬಕ್ಕೆ ಕರೆ ಮಾಡಿದಾಗ ಕುಟುಂಬದವರು ಅಳುತ್ತಿದ್ದರು.
ರಾತ್ರಿ 1.30 ಕ್ಕೆ ಮೈಸೂರಿಗೆ ಶಿಫ್ಟ್ ಮಾಡಿದ್ದಾರೆ. ವೈದ್ಯರು ಕೈಲಾದ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.ರಾಜ್ಯದಲ್ಲಿ ಹೊಸ ಹೊಸ ಟ್ಯಾಕ್ಸ್ ಗಳು ಆರಂಭವಾಗಿವೆ.