ಮೈಸೂರು: ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯ ಡ್ಯಾಂ ಭರ್ತಿಯಾಗಿದೆ.
ಕೇರಳದ ವಯನಾಡು ಪ್ರದೇಶದಲ್ಲಿ ಜೋರು ಮಳೆಯ ಹಿನ್ನೆಲೆ ಮಳೆಯಿಂದಾಗಿ ಕಬಿನಿ ಜಲಾಶಯದ ಒಳಹರಿವು ಗಣನೀಯ ಏರಿಕೆ ಕಂಡಿದೆ. ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ನೀರು ಹರಿಸಲಾಗುತ್ತಿದೆ.
ಕಬಿನಿ ರಾಜ್ಯದಲ್ಲೇ ಮೊದಲು ಭರ್ತಿಯಾದ ಅಣೆಕಟ್ಟು ಆಗಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚನೆ ಹೊರಡಿಸಿದೆ. ಯಾವುದೇ ಕ್ಷಣದಲ್ಲಾದರೂ ನದಿಗೆ ಬಿಡುವ ನೀರಿನ ಪ್ರಮಾಣ ಹೆಚ್ಚಾಗಲಿದೆ. ಕಪಿಲಾ ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹೇಳಲಾಗಿದೆ.
ನದಿ ಪಾತ್ರಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸುವಂತೆ ಧ್ವನಿ ವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ.
ರಾಜ್ಯದಲ್ಲೇ ಮೊದಲು ಭರ್ತಿಯಾದ ಕಬಿನಿ ಅಣೆಕಟ್ಟು
