ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಶುಕ್ರವಾರ ಹೊರಡಿಸಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.