ಮೈಸೂರು: ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು ಮಾದಕ ದ್ರವ್ಯ ಸಿಕ್ಕಿಲ್ಲ ಎಂದು ಮೈಸೂರು ಜಿಲ್ಲಾ ಎಸ್.ಪಿ ಎನ್.ವಿಷ್ಣುವರ್ಧನ್ ಹೇಳಿಕೆ ನೀಡಿದರು.ಪಾರ್ಟಿ ನಡೆಸುವುದಕ್ಕೆ ಯಾವುದೇ ಅನುಮತಿ ಪಡೆದಿಲ್ಲ. ವಿದೇಶಿಗರು ಭಾಗಿಯಾಗಿರುವ ಬಗ್ಗೆ ಮಾಧ್ಯಮದವರು ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುವುದು. ಮದ್ಯ ಸಿಗರೇಟ್ ಸ್ಥಳದಲ್ಲಿ ಇತ್ತು ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದ ಆಯೋಜಕರ ಭೂ ಮಾಲೀಕರ ವಿರುದ್ದ ಕ್ರಮ ಎಂದರು. ಎಫ್ ಎಸ್ ಎಲ್ ತಂಡ ಸಹಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಜಿಲ್ಲಾ ಎಸ್.ಪಿ ಮಾಹಿತಿ ನೀಡಿದರು.