ಬೆಂಗಳೂರು: ಹಾವೇರಿ ಮೂಲದ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಪಂಚೆ ಧರಿಸಿ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡದೆ ಅವಮಾನಿಸಿದ ಘಟನೆಗೆ ಸಂಬAಧಿಸಿದAತೆ ಬೆಂಗಳೂರಿನ ಜಿ ಟಿ ಮಾಲ್ ಗೆ 7 ದಿನ ಬೀಗ ಬಿದ್ದಿದೆ.
ವ್ಯಕ್ತಿಯ ಬಟ್ಟೆ ನೋಡಿ ಅವಮಾನಿಸಿದ ಜಿ ಟಿ ಮಾಲ್ ಗೆ ಏಳು ದಿನ ಬೀಗ ಜಡಿಯಲಾಗುವುದು. ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಕಾನೂನಿನಲ್ಲಿ ಶಿಕ್ಷೆಗೆ ಅವಕಾಶವಿದೆ ಎಂದಿದ್ದಾರೆ. ಹೀಗಾಗಿ ಮಾಲ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.
ಇAದು ಬೆಳಗ್ಗೆ ಸದನದಲ್ಲಿ ಜಿ.ಟಿ ಮಾಲ್ ನಲ್ಲಿ ರೈತನಿಗೆ ಅವಮಾನ ಆದ ವಿಚಾರ ಚರ್ಚೆಗೆ ಕಾರಣವಾಯ್ತು. ಜಿಟಿ ಮಾಲ್ ಒಳಗೆ ಪಂಚೆ ಉಟ್ಟ ರೈತನನ್ನ ಬಿಡದೆ ಅವಮಾನಿಸಿದ ವಿಚಾರವಾಗಿ ಸ್ಪೀಕರ್ ಯು.ಟಿ.ಖಾದರ್ ಗರಂ ಆದರು. ಅವನು ಎಷ್ಟೇ ದೊಡ್ಡವನು ಇರಲಿ, ಅವನಿಗೆ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದರು.
ಎಲ್ಲ ಮಾಲ್ ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕöÈತಿ ಎಂದ ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸದಸ್ಯ ಅಶೋಕ್ ಪಟ್ಟಣ ಮಾತನಾಡಿ, ರಾಜ್ಯದ ಎಲ್ಲ ಕ್ಲಬ್ ಗಳು, ಮಾಲ್ ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದರಿಗೆ ಎಂಟ್ರಿ ಕೊಡಬೇಕು ಎಂದರು.
ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡ್ತಾರೆ, ಅವರು ಕ್ಲಬ್ ಗಳಿಗೆ ಏನಾದ್ರೂ ಹೋದರೆ ಬಿಡ್ತಾರೆ. ಆದರೆ, ಬೇರೆಯವರಿಗೆ ಆ ರೂಲ್ಸ್ ಇಲ್ವಾ ಎಂದು ಸಚಿವ ಬೈರತಿ ಸುರೇಶ್ ಪ್ರಶ್ನಿಸಿದರು. ಅಲ್ಲದೆ, ಸಚಿವ ಬೈರತಿ ಸುರೇಶ್, 7 ದಿನಗಳ ಕಾಲ ಮಾಲ್ ಮುಚ್ಚಿಸುತ್ತೇವೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರದ ಕ್ರಮ ಕೈಗೊಳ್ಳಬಹುದು ಎಂದರು.
ಆಗ ಸಚಿವ ಭೈರತಿ ಸುರೇಶ್, ರೈತ ಸಮುದಾಯಕ್ಕೆ ಸಂಪ್ರದಾಯಕ್ಕೆ ಮಾಡಿದ ಅವಮಾನವಾಗಿದೆ. ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ. ಮುಂದೆ ಇಂತಹ ಘಟನೆ ನಡೆಯಬಾರದು ಎಂಬುದಕ್ಕೆ ಈ ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.
ಈ ಘಟನೆ ಮೊನ್ನೆ ಮಂಗಳವಾರ ನಡೆದಿದ್ದು ಸುದ್ದಿ ಮಾಧ್ಯಮಗಳಲ್ಲಿ ಇಂದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್? ಇನ್??ಚಾರ್ಜ್ ಸುರೇಶ್??? ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.