ಚಾಮರಾಜನಗರ: ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ ಎಂದು ಚಾಮರಾಜನ’ಗರದ ಬಿಜೆಪಿ ಕಾರ್ಯಕರ್ತರಿಂದ ಇಂದು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು, ರಥರ ಬೀದಿ, ದೊಡ್ಡ ಅಂಗಡಿ ಬೀದಿ ಮೂಲಕ ಸಾಗಿ ಭುವನೇಶ್ವರಿ ವೃತ್ತದ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕರಾದ ಬಾಲರಾಜ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಡಾ ಮಾಜಿ ಅಧ್ಯಕ್ಷರಾದ ನಿಜಗುಣ ರಾಜು, ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್ ಬುಲೆಟ್ ಚಂದ್ರು ಹಾಗೂ ಇತರರು ಭಾಗವಹಿಸಿದ್ದರು