ಬಳ್ಳಾರಿ : ವಿರಾಮದ ವೇಳೆ ವಿಷಕಾರಿ ಬೀಜ ಸೇವಿಸಿ 8 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿಷಕಾರಿ ಬೀಜ ಸೇವಿಸಿದ ಬಳಿಕ ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಶಾಲೆ ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಮಗುವಿಗೆ ಹೆಚ್ಚಿನ ಸಮಸ್ಯೆಯಾಗಿದ್ದು, ಉಳಿದವರ ಆರೋಗ್ಯ ಸ್ಥಿರವಾಗಿದೆ. ಬಳ್ಳಾರಿಯ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಮಾಹಿತಿ ನೀಡಿದ್ದಾರೆ.