ಕುಶಾಲನಗರ: ವೀರಶೈವ ಲಿಂಗಾಯಿತ ಸಮುದಾಯದ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಆಡಳಿತದಲ್ಲಿ ತಮ್ನದೇ ಆದ ಛಾಪು ಮೂಡಿಸಿರುವುದು ಶ್ಲಾಘನೀಯ ಎಂದು ರಾಜ್ಯ ಸರ್ಕಾರದ ನಿವೃತ್ತ ಪೆÇೀಲೀಸ್ ಮಹಾನಿರ್ದೇಶಕ ಶಂಕರ ಮಹದೇವ ಬಿದರಿ ಅಭಿಪ್ರಾಯಪಟ್ಟರು.
ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜು ಸಭಾಂಗಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ವೀರಶೈವ ಲಿಂಗಾಯಿತ ಸರ್ಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಕರ್ನಾಟಕ ಲೋಕ ಸೇವಾ ಪರೀಕ್ಷೆಗಿಂತಲೂ ಕೇಂದ್ರ ಲೋಕಸೇವಾ ಪರೀಕ್ಷೆಗಳಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಉತ್ತಮೋತ್ತಮ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ ಎಂದು ಕರೆ ಕೊಟ್ಟರು. ನಿವೃತ್ತ ಬಿಇಒ ಶ್ರೀಶೈಲ ಬೀಳಗಿ ಮಾತನಾಡಿದರು.
ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಂದೀಶ್ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಸೋಮಶೇಖರ್, ಸಂಘಟನಾ ಕಾರ್ಯದರ್ಶಿ ರಾಜಶೇಖರ,
ಸೋಮವಾರಪೇಟೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಕೊಡಗು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು. ಇದೇ ಸಂದರ್ಭ ವೀರಶೈವ ಸಮಾಜದ ನಿವೃತ್ತ ನೌಕರರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನಾ ಬಿದರಿಯವರನ್ನು ಕುಶಾಲನಗರದ ಪ್ರವೇಶ ದ್ವಾರ ಕೊಪ್ಪಾದ ಕಾವೇರಿ ನದಿ ಸೇತುವೆ ಬಳಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭ ಕುಶಾಲನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಪಿರಿಯಾಪಟ್ಟಣ ತಾಲ್ಲೂಕು ಶರಣ ಸಾಹಿತ್ಯ ವೇದಿಕೆ ಅಧ್ಯಕ್ಷ ಶಿವಯೋಗಿ, ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ಠಾಣಾಧಿಕಾರಿ ಚಂದ್ರಶೇಖರ್, ಹೋಟೆಲ್ ಉದ್ಯಮಿ ಎಂ.ಎ.ರಘು ಇದ್ದರು.