ಬೆಳಗಾವಿ: ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದು ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಸಂಚರಿಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಗೆ ನಷ್ಟವಾಗಿದೆ. ಹೀಗಾಗಿ ಬಸ್ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ರಾಜು ಕಾಗೆ ಹೇಳಿದರು. ಕಾಗವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ನಿಗಮ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್ನ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಆಸ್ತಿ ಪರಭಾರೆ ಮಾಡುತ್ತೇವೆ. ಸಂಸ್ಥೆಗೆ ಸೇರಿದ ಹಳೇ ಕಟ್ಟಡಗಳನ್ನು ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದರು.
ರಾಜ್ಯ ಸರ್ಕಾರ ಇತ್ತೀಚಿಗೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಸಿತ್ತು. ಪೆಟ್ರೋಲ್ ಬೆಲೆ 3 ರೂ. ಮತ್ತು ಡಿಸೇಲ್ ಬೆಲೆ 3.50 ರೂಪಾಯಿ ಏರಿಕೆ ಮಾಡಿತ್ತು. ಇದು ರಾಜ್ಯದ ಜನರಿಗೆ ಆಘಾತ ಉಂಟು ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಗಾಯದ ಮೇಲೆ ಬರೆ ಎಳೆಯಲು ಮುಂದಾಗಿದೆ. ಹೌದು ಈಗಾಗಲೆ ಇಂಧನ, ಹಾಲಿನ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಬಸ್ ಟಿಕೆಟ್ ದರ ಏರಿಕೆ ಸಂಕಷ್ಟ ತಂದಿದೆ.