ಚಾಮರಾಜನಗರ:- ಶ್ರೀಗಂಧ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಮುಡಿಗುಂಡಗ್ರಾಮದ ಬ್ರಿಡ್ಜ್ ಬಳಿ ಶನಿವಾರ ಸಂಜೆ ನಡೆದಿದೆ.
ಪ್ರಕರಣದ ಆರೋಪಿ ಮೈಸೂರು ಮೂಲದ ಜಾಫರ್ ಷರೀಪ್ ಹಾಗೂ ಮತ್ತೋರ್ವ ಪರಾರಿಯಾಗಿದ್ದಾನೆ. ಅಕ್ರಮ ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಾರುತಿ ಒಮ್ಮಿಕಾರಿನಲ್ಲಿ ಶ್ರೀಗಂಧ ಸಾಗಾಟ ಮಾಡುತ್ತಿದ್ದಾಗ ಕೊಳ್ಳೇಗಾಲ ಬಫರ್ ವಲಯ ಹಾಗೂ ಕೊಳ್ಳೇಗಾಲ ವೈಲ್ಡ್ ಲೈಫ್ನ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣ ಪತ್ತೆಹಚ್ಚಿದ್ದಾರೆ.
ಆರೋಪಿಗಳು ಇಬ್ಬರು ಪರಾರಿಯಾಗಿದ್ದು ಪತ್ತೆಗೆ ಬಲೆ ಬೀಸಲಾಗಿದೆ. ಕಾರ್ಯಾಚರಣೆಯಲ್ಲಿ 33 ಶ್ರೀಗಂಧದ ತುಂಡುಗಳು, 1 ಕಾರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.