ಮೈಸೂರು: ಕಾಂಗ್ರೆಸ್ ಸರ್ಕಾರ ಬಂದ ಜೋಷ್ನಲ್ಲಿ ಇಂತಹ ಘಟನೆಗಳನ್ನು ಮಾಡುವುದು ಅಥವಾ ಕುಮ್ಮಕ್ಕು ಕೊಡುವುದು ನಿಲ್ಲಬೇಕು. ಶಾಂತಿ, ಸುವ್ಯವಸ್ಥೆ ಕಾಪಾಡುವ ಕೆಲಸವೂ ಆಗಬೇಕೆಂದು ಎಂದು ಮಾಜಿ ಸಚಿವ ಅಶ್ವಥ್ನಾರಾಯಣ ಹೇಳಿದರು.
ನಂಜನಗೂಡಿನಲ್ಲಿ ಭಾರತ ಮಾತೆಗೆ ಜೈಕಾರ ಹಾಕಿದ್ದಕ್ಕಾಗಿ ಚಾಕುವಿನಿಂದ ಇರಿತಕ್ಕೊಳಗಾಗಿ
ಕೆ.ಆರ್.ಆಸ್ಪತ್ರೆಗೆ ದಾಖಲಾಗಿರುವ ಯುವಕರನ್ನು ಭೇಟಿಯಾಗಿ ಸಾಂತ್ವನ ಹೇಳಿದೆವು.
ಹಾಗೆಯೇ, ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿ ಘಟನೆಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ಸರ್ಕಾರದ ಹಸ್ತಕ್ಷೇಪ ಇಲ್ಲದೇ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಆಗ್ರಹಿಸುತ್ತೇನೆ.