ಕೆ.ಆರ್.ಪೇಟೆ:- ಸಿಡಿಲು ಬಡಿದು ರೈತ ಸಾವನ್ನಪ್ಪಿ,ಮತ್ತೊಬ್ಬ ಗಾಯಗೊಂಡಿರುವ ಘಟನೆ ಘಟನೆ ತಾಲ್ಲೂಕಿನ ಬೀರುವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜವರೇಗೌಡರ ಪುತ್ರ ಮಂಜುನಾಥ್(40) ಮೃತ ಪಟ್ಟ ದುರ್ದೈವಿಯಾಗಿದ್ದಾರೆ.
ಮಂಜುನಾಥ್ ತಮಗೆ ಸೇರಿದ ಸರ್ವೇ.ನಂ 97/1 ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸುವ ಸಂದರ್ಭದಲ್ಲಿ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ಗುಡುಗು ಸಿಡಿಲು ಸಮೇತ ಮಳೆ ಸುರಿದಿದೆ.
ಈ ವೇಳೆ ಜಮೀನಿನಲ್ಲೆ ಇದ್ದ ಮಂಜುನಾಥ್ ಗೆ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ರೈತ ಸಿಡಿಲು ಸ್ಪರ್ಶಕ್ಕೆ ಸಿಲುಕಿ ರಾಜು (47) ಬಂಡಿಹೊಳೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕೃಷಿ ಚಟುವಟಿಕೆ ಮುಖಾಂತರ ದುಡಿದು ಕುಟುಂಬಕ್ಕೆ ಆಸರೆಯಾಗಿದ್ದ ಮಂಜುನಾಥ್ ಸಾವಿನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ ಹಾಗಾಗಿ ಸರ್ಕಾರ ಈ ಘಟನೆ ಮತ್ತು ಕುಟುಂಬವನ್ನು ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾ. ಪಂ.ಮಾಜಿ ಅಧ್ಯಕ್ಷ ಬೀರುವಳ್ಳಿ ಕುಮಾರ್, ಸೊಸೈಟಿ ಅಧ್ಯಕ್ಷ ಈರೇಗೌಡ ಸರ್ಕಾರವನ್ನು ಒತ್ತಾಯಿಸಿದರು.