ಚಾಮರಾಜನಗರ: ತಮಿಳುನಾಡಿಗೆ 18 ದಿನಗಳ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆದೇಶವನ್ನು ಸುಪ್ರೀಂನಲ್ಲಿ ಚಾಲೆಂಜ್ ಮಾಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹನೂರು ತಾಲೂಕಿನ ಮಾದಪ್ಪನ ಸನ್ನಿಧಾನದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಮಾಡುತ್ತೇವೆ, ಸದ್ಯ ನಮ್ಮ ಬಳಿ ನೀರು ಇಲ್ಲ ಈಗಾಗ್ಲೆ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸ್ಪಷ್ಟನೆ ಕೊಟ್ಟರು.
ಚಾಮರಾಜನಗರಕ್ಕೆ ಅಂಟಿದ ಮೌಡ್ಯ ತೊಡೆದು ಹಾಕಿರುವೆ, ಕಳೆದ ಬಾರಿ 12 ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ, ಇಂದು ಕೆಡಿಪಿ ಸಙೆ ನಡೆಸಲಿದ್ದೇನೆ ಎಂದು ತಿಳಿಸಿದರು. ಕಾವೇರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಕಿಡಿಕಾರಿದರು.
ಇನ್ನು,ಇದೇ ವೇಳೆ ದೇವರಲ್ಲಿ ಪ್ರಾರ್ಥಿಸಿರುವೆ, ತೀವ್ರ ಬರಗಾಲದ ಹಿನ್ನೆಲೆ ಮಳೆಗಾಗಿ ಮೊರೆ ಹೋಗಿರುವೆ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿರುವೆ ಮಾದಪ್ಪನ ಮೇಲೆ ನನಗೆ ನಂಬಿಕೆ ಇದೆ. ಉತ್ತಮ ಮಳೆ ಬೀಳುವ ನೀರೀಕ್ಷೆ ಇದೆ ಎಂದ ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು ಸಚಿವರಾದ ಕೆ.ವೆಂಕಟೇಶ್, ಎಚ್.ಸಿ.ಮಹಾದೇವಪ್ಪ ಜೊತೆಗೂಡಿ ಬಂದ ಸಿದ್ದರಾಮಯ್ಯ ಮಲೆ ಮಹದೇಶ್ವರ ಸ್ವಾಮಿಗೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ, ಬೆಳ್ಳಿ ದಂಡ ಹಿಡಿದು ಬೆಳ್ಳಿ ರಥ ಸೇವೆ ನಡೆಸಿದರು.