ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ದಂಧೆಗೆ ಸಿಸಿಬಿ ಪೊಲೀಸರು ಬ್ರೇಕ್ ಹಾಕಿದ್ದಾರೆ. ಸ್ಪಾ ಮೇಲೆ ದಾಳಿ ನಡೆಸಿ ಮೂವರು ಮಹಿಳೆಯರನ್ನ ರಕ್ಷಿಸಿ ಮಾಲೀಕರನ್ನ ಬಂಧಿಸಿದ್ದಾರೆ.ಮೂವರು ಗ್ರಾಹಕರನ್ನ ವಶಕ್ಕೆ ಪಡೆದಿದ್ದಾರೆ.ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ಹೈಟೆಕ್ ದಂಧೆಗೆ ಸಿಸಿಬಿ ಪೊಲೀಸರು ಕಡಿವಾಣ ಹಾಕಿದ್ದಾರೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೂಯೆಜ್ ಫಾರಂ ರಸ್ತೆಯಲ್ಲಿರುವ ಶ್ರೀ ಬ್ಯೂಟಿ ಪಾರ್ಲರ್ ಅಂಡ್ ಸ್ಪಾ ಸೆಂಟರ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಮೂವರು ಮಹಿಳೆಯರಿಗೆ ಹಣದ ಆಮಿಷ ತೋರಿಸಿ ವೇಶ್ಯಾವಟಿಕೆ ಬಳಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.ಲಕ್ಷ್ಮಿ ಎಂಬುವರ ಒಡೆತನದಲ್ಲಿ ಸ್ಪಾ ನಡೆಯುತ್ತಿದೆ.ಲಕೋಟೆ ಎಂಬ ಅ್ಯಾಪ್ ಮೂಲಕ ಗ್ರಾಹಕರನ್ನ ಸೆಳೆಯಲಾಗುತ್ತಿರುವುದು ತನಿಖೆ ವೇಳೆ ಬಯಲಾಗಿದೆ.ಆನ್ ಲೈನ್ ನಲ್ಲೇ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿರುವುದೂ ಸಹ ತನಿಖೆಯಲ್ಲಿ ತಿಳಿದು ಬಂದಿದೆ.ಸ್ಪಾ ಮಾಲೀಕರಾದ ಲಕ್ಷ್ಮಿರವರನ್ನ ಬಂಧಿಸಿ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…