ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸುಧಾರಿಸಿದ್ದು, ಆಂಜಿಯೋಗ್ರಾಮ್ ಮಾಡುತ್ತಿದ್ದಾರೆ. ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯ ಐಸಿಯುನಲ್ಲಿ ಬ್ಯಾಂಕ್ ಜನಾರ್ದನ್ ಅವರನ್ನು ಇರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ. ಅವರಿಗೆ 74 ವರ್ಷ ವಯಸ್ಸಾಗಿದೆ.
ಬ್ಯಾಂಕ್ ಜನಾರ್ದನ್ ಅವರ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿರುವ ಅವರ ಪುತ್ರ ಗುರುಪ್ರಸಾದ್, ‘ಬ್ಯಾಂಕ್ ಜನಾರ್ದನ್ ಅವರು ಆರೋಗ್ಯವಾಗಿದ್ದಾರೆ. ಆಸ್ಪತ್ರೆಯ ವೈದ್ಯರು ಆಂಜಿಯೋಗ್ರಾಮ್ ಮಾಡುತ್ತಿದ್ದಾರೆ. ಸದ್ಯ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ..’ ಎಂದು ಹೇಳಿದ್ದಾರೆ.