ಮೈಸೂರಿನ ಕರಾಮುವಿ ಘಟಿಕೋತ್ಸವ ಭವನದಲ್ಲಿ 2022 ರ ಹುಲಿ ಗಣತಿ ವರದಿ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನ ಮಂತ್ರಿಗಳು
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಂಡೀಪುರದಿಂದ ವಿಶೇಷ ಹೆಲಿಕಾಫ್ಟರ್ ಮೂಲಕ ಮೈಸೂರಿನ ಓವಲ್ ಮೈದಾನದ ಹೆಲಿಪ್ಯಾಡ್ ಗೆ ಆಗಮಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಘಟಿಕೋತ್ಸವ ಭವನದಲ್ಲಿ 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡುವ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿಗಳು ಹೆಲಿಪ್ಯಾಡ್ ನಿಂದ ವಾಹನ ಮೂಲಕ ತೆರಳಿದರು.
*ಮೈಸೂರು ನಗರಕ್ಕಾಗಮಿಸಿದ ಪ್ರಧಾನ ಮಂತ್ರಿಗಳು
ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಮೈಸೂರು ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ .
ಪ್ರಧಾನ ಮಂತ್ರಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು
ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಅವರು ಉಪಸ್ಧಿತರಿದ್ದರು.