ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆ, ಪಾಪಿ ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮಂಥನಹಳ್ಳಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ ಕೊಲೆಯಾದ ಮಹಿಳೆ. ಜಯರಾಮು ಕೊಲೆಗೈದ ದುರ್ದೈವಿ.
ಕೌಟುಂಬಿಕ ವಿಚಾರವಾಗಿ ದಂಪತಿಗಳ ನಡುವೆ ಜಗಳ ಶುರುವಾಗಿದೆ. ಬಳಿಕ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ. ಕೋಪಗೊಂಡಿದ್ದ ಪತಿ ಜಯರಾಮು ತನ್ನ ಪತ್ನಿ ತೇಜಸ್ವಿನಿ ಕುತ್ತಿಗೆಗೆ ಸ್ಕ್ರೂಡ್ರೈವರ್ನಿಂದ ಚುಚ್ಚಿದ್ದಾನೆ.
ಸ್ಕ್ರೂಡ್ರೈವರ್ನಿಂದ ಚುಚ್ಚಿರೋದು ಮಾತ್ರವಲ್ಲದೆ, ಬಳಿಕ ತಲೆಗೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ತೇಜಸ್ವಿನಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.