ಮಂಡ್ಯ:- ರಾಷ್ಟ್ರೀಯ ಹೆದ್ದಾರಿಯಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ತೆಗೆದಿದ್ದ ಹಳ್ಳಕ್ಕೆ ಕೆಎಸ್ಆರ್ಟಿಸಿ ಬಸ್ ಬಿದ್ದಿರುವ ಘಟನೆ ಮಾರೇಹಳ್ಳಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಚಾಲಕನಿಗೆ ತೀವ್ರ ಗಾಯಗಳಾಗಿದೆ. ಕೆಲವು ಪ್ರಯಾಣಿಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಚಾಲಕ ಹಾಗೂ ಪ್ರಯಾಣಿಕರಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತಕ್ಕೆ ಸೇತುವೆ ಕಾಮಗಾರಿ ಬಗ್ಗೆ ಸೂಚನಾ ಫಲಕ ಅಳವಡಿಸದೆ ಇರುವುದೇ ಕಾರಣ ಎಂದು ಆರೋಪಿಸಲಾಗಿದೆ.
ಬಸ್ ತಲಕಾಡಿನಿಂದ ಮಳವಳ್ಳಿ ಕಡೆಗೆ ಮಾರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ತೆರಳುತ್ತಿತ್ತು. ಈ ವೇಳೆ ಬಸ್ ಸೇತುವೆ ನಿರ್ಮಾಣಕ್ಕೆ ತೆಗೆದಿದ್ದ ಹಳ್ಳಕ್ಕೆ ನುಗ್ಗಿದೆ. ಬಸ್ ಹಳ್ಳಕ್ಕೆ ಬೀಳುತ್ತಿದ್ದಂತೆ ಪಿಲ್ಲರ್ಗಳಿಗೆ ಹಾಕಿದ್ದ ಕಬ್ಬಿಣದ ಸಲಾಕೆಗಳು ಬಾಗಿವೆ. ಅದೃಷ್ಟವಶಾತ್ ಬಸ್ ನೇರವಾಗಿ ಹಳ್ಳಕ್ಕೆ ಇಳಿದಿದೆ. ಬಸ್ ಪಲ್ಟಿಯಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂಬ ಮಾತುಗಳು ಕೇಳಿಬಂದಿದೆ.