ಮಂಡ್ಯ:- ಬೈಕ್ ವೀಲ್ಹಿಂಗ್ ಮಾಡುವ ವೇಳೆ ಕಾರಿಗೆ ಬೈಕ್ ಡಿಕ್ಕಿಯಾದ ಘಟನೆ ಜಿಲ್ಲೆಯ ಮದ್ದೂರು ನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಮದ್ದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಂಡ ಕಂಡಲ್ಲಿ ಪುಂಡರ ವೀಲ್ಹಿಂಗ್ ಹಾವಳಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೀಲ್ಹಿಂಗ್ ನಡೆಸುವ ಮೂಲಕ ಪುಂಡರು ಇತರರ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.