ಚಾಮರಾಜನಗರ:- ಭಾರತದ ನಯಾಗರ ಎಂದೇ ಪ್ರಸಿದ್ಧವಾಗಿರುವ ಕರ್ನಾಟಕ ಹಾಗೂ ತಮಿಳುನಾಡಿನ ಎರಡೂ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದ ಹಿನ್ನೀರಿನಲ್ಲಿ ತೆಪ್ಪಗಳ ರೇಸ್ ನಡೆದಿದೆ.
ಊಟುಮಲೈ ಎಂಬ ಗ್ರಾಮಸ್ಥರು ಮಾರಿಯಮ್ಮನ ಹಬ್ಬದ ಪ್ರಯುಕ್ತ ಈ ರೇಸ್ ನಡೆಸಿದ್ದು ರೇಸ್ ನಲ್ಲಿ 8-10 ತೆಪ್ಪಗಳು ಭಾಗಿಯಾಗಿವೆ. ಒಂದು ತೆಪ್ಪದಲ್ಲಿ ಇಬ್ಬರು ಕುಳಿತು 100 ಮೀ ರೇಸ್ ನಡೆದಿದ್ದು ಗೆದ್ದವರಿಗೆ ಚಿನ್ನಾಭರಣವನ್ನು ಬಹುಮಾನವಾಗಿ ಕೊಡಲಾಗಿದೆ.
ಮೊದಲ ಬಹುಮಾನವನ್ನು ಪೆರುಮಾಳ್- ಮಯಿಲ್, ಎರಡನೇ ಬಹುಮಾನವಾದ 2 ಗ್ರಾಂ ಚಿನ್ನವನ್ನು ಶ್ರೀನಿ- ಪೆರುಮಾಳ್ ಹಾಗೂ 3 ನೇ ಬಹುಮಾನವಾದ 8 ಸಾವಿರ ಹಣವನ್ನು ಸತೀಶ್- ಕರುಪ್ಪನ್ ಎಂಬವರು ಪಡೆದಿದ್ದಾರೆ.
ಭೋರ್ಗರೆದು ಉಕ್ಕಿ ಹರಿಯುವ ಕಾವೇರಿಯಲ್ಲಿ ರೋಮಾಂಚಕ ರೇಸ್ ನಡೆದಿದ್ದು. ಜನರಿಗೆ ಮನರಂಜನೆಯನ್ನು ನೀಡಿದೆ.