ಕೊಡಗು:- ಕೊಡಗಿನ ವೀರ, ಭಾರತೀಯ ಸೈನ್ಯದ ಭೂ ಸೇನೆಯ ದಂಡನಾಯಕರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತಕ್ಕೆ ಇಂದು ರಂದು ಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಗುದ್ದಿದೆ. ಪರಿಣಾಮ ವೃತ್ತ ಪುಡಿಪುಡಿಯಾಗಿದ್ದು ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ.
ಏನಿದು ಘಟನೆ?
ಮಡಿಕೇರಿ ಡಿಪೆÇ್ಪದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಗೆ ಎದುರಿಗೆ ಬರುತ್ತಿದ್ದ ಪಿಕಪ್ ವಾಹನ ಅಪಘಾತ ತಪ್ಪಿಸಲು ಹೋಗಿ ತಿಮ್ಮಯ್ಯ ಮೂರ್ತಿಗೆ ಗುದ್ದಿದೆ. ಘಟನೆಯಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಭಾರಿ ಹಾನಿಯಾಗಿದೆ. ಬಸ್? ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಡಿಕೇರಿ ನಗರ ಪೆÇಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಸ್ ಚಾಲಕ ಕೊಟ್ರೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.