ಬೆಂಗಳೂರು:- ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಸಿಇಒ ಸಭೆಯಲ್ಲಿ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣ ಪ್ರಕಾಶ್ ಪಾಟೀಲ್ ಮುಂತಾದವರು ಅನುಮತಿ ಪಡೆಯದೇ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಸಿಎಂ ಗಮನಕ್ಕೆ ತಂದರು.