ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಹೊಸ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಇದರ ಜೊತೆಗೆ ಮಹಿಳೆಯರಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ಇರಿಸಲಿದ್ದು, ಪ್ರಧಾನಮಂತ್ರಿ ಬುಡಕಟ್ಟು ಸುಧಾರಿತ ಗ್ರಾಮ ಅಭಿಯಾನದಡಿ 63000 ಗ್ರಾಮಗಳ 5 ಕೋಟಿ ಆದಿವಾಸಿಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಇನ್ನು ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗುವುದು ಎಂದರು.